ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುವುದು ಮತ್ತಷ್ಟು ವಿಳಂಬ : ನಾಸಾ
Update: 2024-12-18 17:37 GMT
ವಾಷಿಂಗ್ಟನ್ : ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಉಳಿದುಕೊಂಡಿರುವ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಭೂಮಿಗೆ ಮರಳುವುದು ಮತ್ತಷ್ಟು ವಿಳಂಬವಾಗಲಿದೆ ಎಂದು ಅಮೆರಿಕದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನಾಸಾ ಬುಧವಾರ ಹೇಳಿದೆ.
ಇವರಿಬ್ಬರು ಫೆಬ್ರವರಿಯಲ್ಲಿ ಭೂಮಿಗೆ ಮರಳುವ ನಿರೀಕ್ಷೆಯಿತ್ತು. ಆದರೆ ಮಾರ್ಚ್ ಅಂತ್ಯದವರೆಗೆ ಇವರಿಬ್ಬರು ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲೇ ಉಳಿಯಲಿದ್ದಾರೆ ಎಂದು ನಾಸಾ ಹೇಳಿದೆ.