ಅಮೆರಿಕ: ರಸ್ತೆ ಅಪಘಾತದಲ್ಲಿ ಭಾರತದ ವಿದ್ಯಾರ್ಥಿನಿ ಮೃತ್ಯು
Update: 2024-05-28 17:21 GMT
ವಾಷಿಂಗ್ಟನ್: ಅಮೆರಿಕದ ಫ್ಲೋರಿಡಾ ರಾಜ್ಯದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ತೆಲಂಗಾಣ ಮೂಲದ ವಿದ್ಯಾರ್ಥಿನಿ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಫ್ಲೋರಿಡಾ ಅಟ್ಲಾಂಟಿಕ್ ವಿವಿಯ 22 ವರ್ಷದ ವಿದ್ಯಾರ್ಥಿನಿ ಗುಂಟಿಪಲ್ಲಿ ಸೌಮ್ಯ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಧಾವಿಸಿ ಬಂದ ಕಾರು ಡಿಕ್ಕಿಯಾಗಿ ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ಇತ್ತೀಚೆಗಷ್ಟೇ ಸ್ನಾತಕೋತ್ತರ ಪದವಿ ಪಡೆದಿದ್ದ ಸೌಮ್ಯ ಉದ್ಯೋಗಕ್ಕೆ ಸೇರಿ ತನ್ನ ಕುಟುಂಬದವರಿಗೆ ಆಧಾರವಾಗುವ ಕನಸು ಕಂಡಿದ್ದರು. ಅವರ ಕುಟುಂಬದವರಿಗೆ ಆರ್ಥಿಕ ನೆರವು ಸಂಗ್ರಹಿಸುವ ಅಭಿಯಾನ ಆರಂಭಿಸಿರುವುದಾಗಿ ಪ್ಲೋರಿಡಾ ವಿವಿಯ ಭಾರತೀಯ ವಿದ್ಯಾರ್ಥಿಗಳು ಹೇಳಿದ್ದಾರೆ.