ಗಾಝಾ ಕದನ ವಿರಾಮಕ್ಕೆ ಆಗ್ರಹಿಸಿ ಇಸ್ರೇಲ್ನಲ್ಲಿ ಪ್ರತಿಭಟನೆ

Update: 2024-03-31 17:22 GMT

ಗಾಝಾ - Photo: PTI

ಟೆಲ್ಅವೀವ್: ಗಾಝಾದಲ್ಲಿ ಉಲ್ಬಣಿಸಿರುವ ಯುದ್ಧವನ್ನು ಸೂಕ್ತವಾಗಿ ನಿರ್ವಹಿಸುವಲ್ಲಿ ವಿಫಲವಾಗಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಇಸ್ರೇಲ್ನ ಟೆಲ್ಅವೀವ್ ಮತ್ತು ಜೆರುಸಲೇಮ್ ನಗರಗಳಲ್ಲಿ ಬೃಹತ್ ಪ್ರತಿಭಟನೆ ನಡೆದಿದೆ.

ಹಮಾಸ್ ಒತ್ತೆಸೆರೆಯಲ್ಲಿ ಇರುವ 130ಕ್ಕೂ ಅಧಿಕ ಒತ್ತೆಯಾಳುಗಳ ಸುರಕ್ಷಿತ ಬಿಡುಗಡೆಯಲ್ಲಿ ನೆತನ್ಯಾಹು ವಿಫಲವಾಗಿದ್ದಾರೆ ಮತ್ತು ಗಾಝಾ ಕದನವಿರಾಮಕ್ಕೆ ಅವರು ಬಹುದೊಡ್ಡ ತಡೆಯಾಗಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

`ರಾಜಧಾನಿ ಟೆಲ್ಅವೀವ್ನ ಪ್ರಮುಖ ಕಪ್ಲಾನ್ ವೃತ್ತದಲ್ಲಿ ಗುಂಪು ಸೇರಿದ ಪ್ರತಿಭಟನಾಕಾರರು ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ್ದು ಪೊಲೀಸರ ಜತೆ ಘರ್ಷಣೆ ನಡೆಸಿದ್ದಾರೆ. ಹಲವೆಡೆ ಟೈರ್ಗಳಿಗೆ ಬೆಂಕಿ ಹಚ್ಚಿದ್ದು ರಸ್ತೆಗಳನ್ನು ತಡೆದು ಕಾನೂನು ಸುವ್ಯವಸ್ಥೆಗೆ ಅಡ್ಡಿಪಡಿಸಿದ್ದಾರೆ. ಪ್ರತಿಭಟನೆ ನಡೆಸುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ಆಧಾರ ಸ್ಥಂಭವಾಗಿದೆ. ಆದರೆ ಅದು ಕಾನೂನಿನ ಚೌಕಟ್ಟಿನಡಿ ಇರಬೇಕು' ಎಂದು ಪೊಲೀಸ್ ಇಲಾಖೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದೆ.

Tags:    

Writer - ವಾರ್ತಾಭಾರತಿ

contributor

Editor - Naufal

contributor

Byline - ವಾರ್ತಾಭಾರತಿ

contributor

Similar News