ಪದಗ್ರಹಣ ಸಮಾರಂಭಕ್ಕೆ ಚೀನಾ ಅಧ್ಯಕ್ಷರನ್ನು ಆಹ್ವಾನಿಸಿದ ಟ್ರಂಪ್

Update: 2024-12-12 15:38 GMT

ಕ್ಸಿ ಜಿಂಪಿಂಗ್‍ , ಡೊನಾಲ್ಡ್ ಟ್ರಂಪ್ | PC : PTI

ವಾಷಿಂಗ್ಟನ್ : ಮುಂದಿನ ತಿಂಗಳು ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿರುವ ಡೊನಾಲ್ಡ್ ಟ್ರಂಪ್ ಪದಗ್ರಹಣ ಸಮಾರಂಭಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿಂಪಿಂಗ್‍ರನ್ನು ಆಹ್ವಾನಿಸಿರುವುದಾಗಿ ಸಿಬಿಎಸ್ ವರದಿ ಮಾಡಿದೆ.

ವಿಶ್ವದ ಎರಡನೇ ಅತೀ ದೊಡ್ಡ ಆರ್ಥಿಕತೆಯಾಗಿರುವ ಚೀನಾದ ವಿರುದ್ಧ ಹೊಸ ಸುಂಕ ವಿಧಿಸುವ ಬೆದರಿಕೆ ಒಡ್ಡಿದ್ದ ಟ್ರಂಪ್, ಇದೀಗ ಚೀನಾದ ಜತೆಗಿನ ಸಂಬಂಧ ಸುಧಾರಿಸಲು ಪ್ರಯತ್ನಿಸುತ್ತಿರಬಹುದು ಎಂದು ಮಾಧ್ಯಮಗಳು ವಿಶ್ಲೇಷಿಸಿವೆ.

ಆದರೆ ಟ್ರಂಪ್ ಆಹ್ವಾನವನ್ನು ಜಿಂಪಿಂಗ್ ಒಪ್ಪಿಕೊಳ್ಳುವ ಸಾಧ್ಯತೆಯಿಲ್ಲ. ಇದುವರೆಗೆ ಚೀನಾದ ಯಾವುದೇ ನಾಯಕರು ಅಮೆರಿಕ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡಿಲ್ಲ. ಚೀನಾದ ರಾಯಭಾರಿಗಳು ಪಾಲ್ಗೊಳ್ಳುತ್ತಿದ್ದಾರೆ.

ಟ್ರಂಪ್ ಅಧ್ಯಕ್ಷರಾಗಿ ಆಯ್ಕೆಗೊಂಡ ಬಳಿಕ ಅವರನ್ನು ಅಭಿನಂದಿಸಿದ್ದ ಕ್ಸಿಜಿಂಪಿಂಗ್, ಉಭಯ ದೇಶಗಳ ನಡುವಿನ ಸಂಬಂಧಗಳನ್ನು ಸ್ಥಿರವಾಗಿಡಲು ಬಯಸುವುದಾಗಿ ಹೇಳಿದ್ದರು.

Tags:    

Writer - ವಾರ್ತಾಭಾರತಿ

contributor

Editor - Musaveer

contributor

Byline - ವಾರ್ತಾಭಾರತಿ

contributor

Similar News