ಅಮೆರಿಕ ಅಧ್ಯಕ್ಷೀಯ ಚುನಾವಣೆ: ಗೆಲುವಿನ ಸನಿಹದಲ್ಲಿ ಡೊನಾಲ್ಡ್‌ ಟ್ರಂಪ್

Update: 2024-11-06 07:48 GMT

Photo: PTI

ಅಮೆರಿಕ: ಯುಎಸ್‌ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಪ್ರಚಂಡ ಮುನ್ನಡೆ ಸಾಧಿಸಿದ್ದು, ಕಮಲಾ ಹ್ಯಾರಿಸ್ ಹಿನ್ನೆಡೆಯನ್ನು ಅನುಭವಿಸಿದ್ದಾರೆ.

ಪ್ರಸ್ತುತ, ಟ್ರಂಪ್ 25 ರಾಜ್ಯಗಳಲ್ಲಿ ಮತ್ತು ಕಮಲಾ ಹ್ಯಾರಿಸ್ 16 ರಾಜ್ಯಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಡೊನಾಲ್ಡ್ ಟ್ರಂಪ್ 270 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಮಲಾ ಹ್ಯಾರಿಸ್ 214 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಗೆಲುವಿಗೆ 270 ಸ್ಥಾನಗಳ ಅವಶ್ಯಕತೆಯಿದ್ದು, ಈ ಸ್ಥಾನಗಳಲ್ಲಿ ಟ್ರಂಪ್‌ ಮುನ್ನಡೆ ಸಾಧಿಸಿದ್ದಾರೆ.

ಪೆನ್ಸಿಲ್ವೇನಿಯಾ, ಅರಿಜೋನಾ, ಜಾರ್ಜಿಯಾ, ಮಿಚಿಗನ್, ನೆವಾಡಾ, ಉತ್ತರ ಕೆರೊಲಿನಾ ಮತ್ತು ವಿಸ್ಕಾನ್ಸಿನ್ ರಾಜ್ಯಗಳ ಫಲಿತಾಂಶ ಅಮೆರಿಕದ 47ನೇ ಅಧ್ಯಕ್ಷರು ಯಾರು ಎಂಬುದನ್ನು ಪರಿಣಾಮಕಾರಿಯಾಗಿ ನಿರ್ಧರಿಸುವ ನಿರೀಕ್ಷೆಯಿದೆ.

ಚುನಾವಣೆ ಫಲಿತಾಂಶದಲ್ಲಿ ಮುನ್ನಡೆ ಸಾಧಿಸುತ್ತಿದ್ದಂತೆ ಫ್ಲೋರಿಡಾದ ಪಾಮ್ ಬೀಚ್ನಲ್ಲಿ ನಡೆದ ಚುನಾವಣಾ ವೀಕ್ಷಣಾ ಕಾರ್ಯಕ್ರಮದಲ್ಲಿ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಡೊನಾಲ್ಡ್ ಟ್ರಂಪ್, ಹಿಂದೆಂದೂ ಕಂಡಿರದ ರಾಜಕೀಯ ಗೆಲುವು. ನಾನು ಅಮೆರಿಕಾದ ಜನರಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News