ಸಿರಿಯಾ |ಇಸ್ರೇಲ್ ದಾಳಿಯಲ್ಲಿ ಇಬ್ಬರು ಮೃತ್ಯು

Update: 2024-09-12 16:34 GMT

  ಸಾಂದರ್ಭಿಕ ಚಿತ್ರ

ಬೈರುತ್ : ಸಿರಿಯಾ ನಿಯಂತ್ರಿತ ಗೋಲನ್ ಹೈಟ್ಸ್‍ನ ಕ್ಯುನೈತ್ರಾ ಪ್ರಾಂತದಲ್ಲಿ ಗುರುವಾರ ಇಸ್ರೇಲ್‍ನ ವೈಮಾನಿಕ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

ದಮಾಸ್ಕಸ್-ಕ್ಯುನೈತ್ರಾ ರಸ್ತೆಯಲ್ಲಿ ಸಾಗುತ್ತಿದ್ದ ವಾಹನವೊಂದನ್ನು ಗುರಿಯಾಗಿಸಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ದಾಳಿಯ ಬಳಿಕ ವಾಹನ ಬೆಂಕಿಯಲ್ಲಿ ಸುಟ್ಟುಹೋಗಿದ್ದು ಮೃತದೇಹಗಳನ್ನು ಗುರುತಿಸಲಾಗಿಲ್ಲ ಎಂದು ಸಿರಿಯಾದ ಮಾನವ ಹಕ್ಕುಗಳ ಏಜೆನ್ಸಿ ಹೇಳಿದೆ. ಗೋಲಾನ್ ಹೈಟ್ಸ್‍ನ ಹೆಚ್ಚಿನ ಭಾಗವನ್ನು 1967ರ ಮಧ್ಯಪ್ರಾಚ್ಯ ಯುದ್ಧದಲ್ಲಿ ಸಿರಿಯಾದಿಂದ ವಶಪಡಿಸಿಕೊಂಡಿರುವ ಇಸ್ರೇಲ್ ಬಳಿಕ ಅದನ್ನು ಸ್ವಾಧೀನಪಡಿಸಿಕೊಂಡಿತ್ತು. ಈ ನಡೆಯನ್ನು ಅಂತರಾಷ್ಟ್ರೀಯ ಸಮುದಾಯ ಮಾನ್ಯ ಮಾಡಿಲ್ಲ. ಇಸ್ರೇಲ್-ಹಮಾಸ್ ಸಂಘರ್ಷದಿಂದ ದೂರ ಉಳಿಯಲು ಸಿರಿಯಾ ಬಯಸಿದ್ದರೂ ಸಿರಿಯಾದಲ್ಲಿ ಸಕ್ರಿಯವಾಗಿರುವ ಹಿಜ್ಬುಲ್ಲಾ ಬೆಂಬಲಿತ ಸಶಸ್ತ್ರ ಹೋರಾಟಗಾರರ ಗುಂಪು ಇಸ್ರೇಲ್‍ನ ವಶದಲ್ಲಿರುವ ಗೋಲಾನ್ ಹೈಟ್ಸ್ ಮೇಲೆ ರಾಕೆಟ್ ದಾಳಿ ನಡೆಸುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - Musaveer

contributor

Byline - ವಾರ್ತಾಭಾರತಿ

contributor

Similar News