ಉಕ್ರೇನ್: ರಶ್ಯದ ಡ್ರೋನ್ ದಾಳಿಯಲ್ಲಿ 9 ಮಂದಿ ಮೃತ್ಯು

Update: 2025-04-23 21:12 IST
ಉಕ್ರೇನ್: ರಶ್ಯದ ಡ್ರೋನ್ ದಾಳಿಯಲ್ಲಿ 9 ಮಂದಿ ಮೃತ್ಯು

PC : X 

  • whatsapp icon

ಕೀವ್: ಉಕ್ರೇನ್ ನ ಮರ್ಹಾನೆಟ್ಸ್ ನಗರದ ಮೇಲೆ ರಶ್ಯ ನಡೆಸಿದ ಡ್ರೋನ್ ದಾಳಿಯಲ್ಲಿ ಕನಿಷ್ಠ 9 ಮಂದಿ ಸಾವನ್ನಪ್ಪಿದ್ದು ಇತರ 30 ಮಂದಿ ಗಾಯಗೊಂಡಿದ್ದಾರೆ. ಉಕ್ರೇನ್ ನ ನಾಗರಿಕ ಮೂಲಸೌಕರ್ಯಗಳನ್ನು ಗುರಿಯಾಗಿಸಿ ದಾಳಿ ನಡೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮರ್ಹಾನೆಟ್ಸ್ನಲ್ಲಿ ಕಾರ್ಮಿಕರು ಪ್ರಯಾಣಿಸುತ್ತಿದ್ದ ಬಸ್ಸಿನ ಮೇಲೆ ರಶ್ಯ ಡ್ರೋನ್ ದಾಳಿ ನಡೆಸಿದ್ದು ಕನಿಷ್ಠ 9 ಮಂದಿ ಸಾವನ್ನಪ್ಪಿದ್ದು ಇತರ 30 ಮಂದಿ ಗಾಯಗೊಂಡಿದ್ದಾರೆ. ಉಕ್ರೇನ್ ನ ಪೂರ್ವ, ದಕ್ಷಿಣ ಮತ್ತು ಮಧ್ಯ ಪ್ರಾಂತಗಳಲ್ಲಿ ಬುಧವಾರ ನಡೆದ ಸರಣಿ ಡ್ರೋನ್ ದಾಳಿಯಲ್ಲಿ ವ್ಯಾಪಕ ನಾಶ-ನಷ್ಟ ಸಂಭವಿಸಿದ್ದು ಹಲವೆಡೆ ಬೆಂಕಿ ಕಾಣಿಸಿಕೊಂಡಿದೆ ಎಂದು ನಿಪ್ರೊಪೆಟ್ರೋವ್ಸ್ಕ್ ಪ್ರಾಂತದ ಮುಖ್ಯಸ್ಥ ಮಿಕೋಲ ಲುಕಾಷುಕ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.

ನಿಪ್ರೊಪೆಟ್ರೋವ್ಸ್ಕ್ ಪ್ರದೇಶದ ಸಿನೆಲ್ನಿಕಿವಸ್ಕಿ ಜಿಲ್ಲೆಯಲ್ಲಿ ನಡೆದ ಪ್ರತ್ಯೇಕ ದಾಳಿಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಮತ್ತು ಕಾರ್ಖಾನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಉಕ್ರೇನ್ ನ ತುರ್ತು ಸೇವಾ ಇಲಾಖೆ ಹೇಳಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News