ನಾಗರಿಕರ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಹತ್ಯೆಯನ್ನು ಖಂಡಿಸಿದ ವಿಶ್ವಸಂಸ್ಥೆ

Update: 2025-04-23 10:29 IST
ನಾಗರಿಕರ ಮೇಲಿನ ದಾಳಿ ಸ್ವೀಕಾರಾರ್ಹವಲ್ಲ: ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಹತ್ಯೆಯನ್ನು ಖಂಡಿಸಿದ ವಿಶ್ವಸಂಸ್ಥೆ

Photo | NDTV

  • whatsapp icon

ಹೊಸದಿಲ್ಲಿ : ಜಮ್ಮುಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಶಸ್ತ್ರಸಜ್ಜಿತ ದಾಳಿಯನ್ನು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ತೀವ್ರವಾಗಿ ಖಂಡಿಸಿದ್ದಾರೆ. ಯಾವುದೇ ಪರಿಸ್ಥಿತಿಯಲ್ಲೂ ನಾಗರಿಕರ ವಿರುದ್ಧದ ದಾಳಿ ಸ್ವೀಕಾರಾರ್ಹವಲ್ಲ ಎಂದು ಹೇಳಿದ್ದಾರೆ.

ʼಎಪ್ರಿಲ್ 22ರಂದು ಜಮ್ಮುಕಾಶ್ಮೀರದಲ್ಲಿ ಕನಿಷ್ಠ 26 ಜನರು ಮೃತಪಟ್ಟ ಸಶಸ್ತ್ರ ದಾಳಿಯನ್ನು ಪ್ರಧಾನ ಕಾರ್ಯದರ್ಶಿಗಳು ಬಲವಾಗಿ ಖಂಡಿಸುತ್ತಾರೆʼ ಎಂದು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಪರವಾಗಿ ಅವರ ವಕ್ತಾರ ಸ್ಟೀಫನ್ ಡುಜಾರಿಕ್ ಹೇಳಿದ್ದಾರೆ.

ಕಾಶ್ಮೀರದ ಪಹಲ್ಗಾಮ್ ಪಟ್ಟಣದ ಬೈಸರಣ್ ಹುಲ್ಲುಗಾವಲಿನಲ್ಲಿ ಮಂಗಳವಾರ ಮಧ್ಯಾಹ್ನ ಮೂವರು ಶಂಕಿತ ಭಯೋತ್ಪಾದಕರು ಪ್ರವಾಸಿಗರ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದರು. ಘಟನೆಯಲ್ಲಿ 26 ಮಂದಿ ಮೃತಪಟ್ಟಿದ್ದರು. ಇವರಲ್ಲಿ ಇಬ್ಬರು ವಿದೇಶಿಯರು ಸೇರಿದ್ದಾರೆ.

ಇದು ಜಮ್ಮುಕಾಶ್ಮೀರದಲ್ಲಿ ನಡೆದಿರುವ ಇತ್ತೀಚಿನ ಅತಿ ದೊಡ್ಡ ಭಯೋತ್ಪಾದಕ ದಾಳಿಯಾಗಿದೆ. ಭಯೋತ್ಪಾದಕ ದಾಳಿಯನ್ನು ಖಂಡಿಸಿರುವ ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ, ಇದು ಹೇಯ ಕೃತ್ಯವಾಗಿದೆ ಎಂದು ಹೇಳಿದ್ದರು.

Tags:    

Writer - ವಾರ್ತಾಭಾರತಿ

contributor

Editor - siddik

contributor

Byline - ವಾರ್ತಾಭಾರತಿ

contributor

Similar News