ಪಶ್ಚಿಮದಂಡೆ: ಇಸ್ರೇಲ್ ದಾಳಿಯಲ್ಲಿ 6 ಮಂದಿ ಸಾವು

Update: 2024-09-05 16:14 GMT
ಪಶ್ಚಿಮದಂಡೆ: ಇಸ್ರೇಲ್ ದಾಳಿಯಲ್ಲಿ 6 ಮಂದಿ ಸಾವು

ಸಾಂದರ್ಭಿಕ ಚಿತ್ರ (PTI)

  • whatsapp icon

ಜೆರುಸಲೆಂ: ಆಕ್ರಮಿತ ಪಶ್ಚಿಮದಂಡೆಯಲ್ಲಿ ಇಸ್ರೇಲ್ ನಡೆಸಿದ ದಾಳಿಯಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ ಎಂದು ಫೆಲೆಸ್ತೀನ್‍ನ ಆರೋಗ್ಯ ಇಲಾಖೆಯ ಅಧಿಕಾರಿಗಳು ಗುರುವಾರ ಹೇಳಿದ್ದಾರೆ.

ಪಶ್ಚಿಮದಂಡೆಯ ಉತ್ತರದ ನಗರ ಟುಬಾಸ್‍ನಲ್ಲಿ ಬುಧವಾರ ರಾತ್ರಿ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಇಸ್ರೇಲ್‍ನಲ್ಲಿ ಬಂಧನದಲ್ಲಿರುವ ಹಮಾಸ್ ಕಮಾಂಡರ್ ನ ಪುತ್ರ ಮುಹಮ್ಮದ್ ಝುಬೈದಿ ಸೇರಿದಂತೆ ಐವರು ಮೃತಪಟ್ಟಿದ್ದಾರೆ. ಅಲ್-ಫರಾ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಹಮಾಸ್‍ನ ಒಬ್ಬ ಸದಸ್ಯ ಸಾವನ್ನಪ್ಪಿದ್ದಾನೆ ಎಂದು ವರದಿ ಹೇಳಿದೆ.

Tags:    

Writer - ವಾರ್ತಾಭಾರತಿ

contributor

Editor - Musaveer

contributor

Byline - ವಾರ್ತಾಭಾರತಿ

contributor

Similar News