ಕಲಬುರಗಿ | ಅಮಿತ್ ಶಾ ಹೇಳಿಕೆ ಖಂಡಿಸಿ ಜ.9ರಂದು ಸೇಡಂನಲ್ಲಿ ಬೃಹತ್ ಪ್ರತಿಭಟನೆ
ಕಲಬುರಗಿ : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವಹೇಳನಕಾರಿ ಹೇಳಿಕೆ ನೀಡಿದ್ದನ್ನು ಖಂಡಿಸಿ ನಾಳೆ (ಗುರುವಾರ) ಸೇಡಂ ಪಟ್ಟಣದಲ್ಲಿ ಸಂವಿಧಾನ ರಕ್ಷಣಾ ಹೋರಾಟ ಸಮಿತಿಯ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಮುಖಂಡ ಮತ್ತು ಸೇಡಂ ತಾಲ್ಲೂಕು ಅಲ್ಪಸಂಖ್ಯಾತ ವರ್ಗದ ಅಧ್ಯಕ್ಷ ಮಹಮ್ಮದ್ ಗೌಸ ಹೇಳಿದ್ದಾರೆ.
ನಾಳೆ ಬೆಳಗ್ಗೆ 11 ಗಂಟೆಗೆ ಸೇಡಂ ಪಟ್ಟಣದಲ್ಲಿರುವ ಶ್ರೀ ಕೋತ್ತಲ ಬಸವೇಶ್ವರ ದೇವಾಲಯದಿಂದ ಕಿರಾಣಾ ಬಜಾರ್, ಬಸ್ ನಿಲ್ದಾಣ ಮಾರ್ಗವಾಗಿ ಬಸವೇಶ್ವರ ವೃತ್ತದವರೆಗೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಪ್ರತಿಭಟನೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಯುವಕರು, ವಿವಿಧ ಸಂಘಟನೆಗಳು ಹಾಗೂ ತಾಲ್ಲೂಕಿನ ಸಾರ್ವಜನಿಕರು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದರು.
ಈ ವೇಳೆಯಲ್ಲಿ ಕಾಂಗ್ರೆಸ್ ಯವ ಘಟಕದ ಅಧ್ಯಕ್ಷ ಭೀಮಾಶಂಕರ ಕೋಳ್ಳಿ , ಯವ ಘಟಕದ ಉಪ ಅಧ್ಯಕ್ಷ ಅಬ್ದುಲ್ ಸತ್ತಾರ್ ನಾಡೇಪಲ್ಲಿ , ಅಜಿಮೋದ್ದಿನ್, ಆರೀಫ ಅಲಿ ಶೇಕ್ ಮತ್ತು ಖಮೋರಿದ್ದಿನ್ ಮತ್ತಿತರರು ಹಾಜರಿದ್ದರು.