ಕಲಬುರಗಿ | 6 ತಿಂಗಳ ಹಿಂದೆ ಮೃತಪಟ್ಟ ಎಂಜಿನಿಯ‌ರ್ ವರ್ಗಾವಣೆ : ನಗರಾಭಿವೃದ್ಧಿ ಇಲಾಖೆ ಎಡವಟ್ಟು

Update: 2024-07-13 15:00 GMT

ಕಲಬುರಗಿ : ಆರು ತಿಂಗಳ ಹಿಂದೆ ಮೃತಪಟ್ಟ ಅಧಿಕಾರಿಯನ್ನು ವರ್ಗಾವಣೆ ಮಾಡಿ ನಗರಾಭಿವೃದ್ಧಿ ಇಲಾಖೆ  ಎಡವಟ್ಟು ಮಾಡಿಕೊಂಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಚಿತ್ತಾಪುರನ ದಿಗ್ಗಾಂವ ಗ್ರಾಮದ ಅಶೋಕ ಭೀಮರಾಯ ಪುಟಪಾಕ್ (54) ಜನವರಿ 12ರಂದು ಮೃತಪಟ್ಟಿದ್ದಾರೆ. ಸೇಡಂ ಪುರಸಭೆಯಲ್ಲಿ ಕಿರಿಯ ಎಂಜಿನಿಯ‌ರ್ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ತೀವ್ರ ಅನಾರೋಗ್ಯದ ಕಾರಣದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದ್ದು, ಜ.13ರಂದು ದಿಗ್ಗಾಂವ ಗ್ರಾಮದಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ಚಿತ್ತಾಪುರ, ವಾಡಿ, ಸೇಡಂ ಪುರಸಭೆಯ ಅಧಿಕಾರಿ, ಸಿಬ್ಬಂದಿ ಪಾಲ್ಗೊಂಡಿದ್ದರು ಎನ್ನಲಾಗಿದೆ.

ನಗರಾಭಿವೃದ್ಧಿ ಇಲಾಖೆಯು ಕಿರಿಯ ಎಂಜಿನಿಯ‌ರ್ ಅಶೋಕ ಪುಟಪಾಕ್‌ ಅವರನ್ನು ಸೇಡಂ ಪುರಸಭೆಯಿಂದ ಕೊಡಗು ಜಿಲ್ಲೆಯ ಮಡಿಕೇರಿ ನಗರಸಭೆಯ ಕಿರಿಯ ಎಂಜಿನಿಯರ್ ಹುದ್ದೆಗೆ ವರ್ಗಾವಣೆ ಮಾಡಲಾಗಿದ್ದು, ಅವರೊಂದಿಗೆ ಕರ್ತವ್ಯ ನಿರ್ವಹಿಸುತ್ತಿದ್ದ ಕಿರಿಯ ಎಂಜಿನಿಯ‌ರ್ ಸಂಪತ್‌ ಕುಮಾರ ಅವರನ್ನೂ ಕೊಡಗು ಜಿಲ್ಲೆಯ ವಿರಾಜಪೇಟೆ ಪುರಸಭೆ ಕಿರಿಯ ಎಂಜಿನಿಯ‌ರ್ ಹುದ್ದೆಗೆ ವರ್ಗಾವಣೆ ಮಾಡಿರುವುದು ಈ ಆದೇಶದಲ್ಲಿ ಇದೆ.

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News