ಹೊಸದಿಲ್ಲಿಯಲ್ಲಿ 10ನೇ ಅಖಿಲ ಭಾರತ ವಿದ್ಯಾರ್ಥಿ ಸಮ್ಮೇಳನ

Update: 2024-11-19 16:58 GMT

ಕಲಬುರಗಿ : ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್‌ ನಿಂದ ನ.27ರಿಂದ 29ರವರೆಗೆ ಹೊಸದಿಲ್ಲಿಯಲ್ಲಿ 10ನೇ ಅಖಿಲ ಭಾರತ ವಿದ್ಯಾರ್ಥಿ ಸಮ್ಮೇಳನ ಜರುಲಿದೆ ಎಂದು ಎಐಡಿಎಸ್‌ಒ ರಾಜ್ಯ ಉಪಾಧ್ಯಕ್ಷ ಹಣಮಂತ ಎಸ್.ಎಚ್. ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ಧಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ʼರಾಜ್ಯದಿಂದ ಸಾವಿರಾರು ವಿದ್ಯಾರ್ಥಿಗಳು ಹೋಗಲಿದ್ದು ಒಟ್ಟು 1 ಲಕ್ಷಕ್ಕೂ ಅಧಿಕ ಜನ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆʼ ಎಂದರು.

ಶಾಲಾ ಕಾಲೇಜುಗಳಲ್ಲಿ ಎಲ್ಲ ಹಂತದ ಶುಲ್ಕ ಏರಿಕೆ ತಡೆಗಟ್ಟಬೇಕು, ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಿ, ಮುಚ್ಚಿದ ಶಾಲೆಗಳನ್ನು ಪುನರಾರಂಭಿಸಬೇಕು. ಖಾಲಿ ಇರುವ ಎಲ್ಲ ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಕೂಡಲೇ ಖಾಯಂ ಆಧಾರದ ಮೇಲೆ ಭರ್ತಿ ಮಾಡಬೇಕು ಎಂದು ಸಮ್ಮೇಳನದಲ್ಲಿ ಸರಕಾರಕ್ಕೆ ಒತ್ತಾಯಿಸಲಾಗುವುದು ಎಂದು ತಿಳಿಸಿದರು.

ಎನ್‌ಟಿಎ ರದ್ದುಗೊಳಿಸಿ ಮತ್ತು ಎಲ್ಲ ಪರೀಕ್ಷಾ ಅಕ್ರಮಗಳ ಕುರಿತು ಪರಿಣಾಮಕಾರಿ ತನಿಖೆ ನಡೆಸಬೇಕು. ನಾಲ್ಕು ವರ್ಷದ ಪದವಿ ತಿರಸ್ಕರಿಸಬೇಕು. ಶಿಕ್ಷಣದ ವ್ಯಾಪಾರೀಕರಣ, ಖಾಸಗೀಕರಣ, ವೃತ್ತಿಪರೀಕರಣದ ನೀಲಿನಕ್ಷೆಯಾಗಿರುವ ಎನ್‌ಇಪಿ-2020ನ್ನು ರದ್ದುಗೊಳಿಸಿ ಮತ್ತು ಶಿಕ್ಷಣದಲ್ಲಿ ಕೋಮುವಾದಿಕರಣವನ್ನು ತಡೆಗಟ್ಟಬೇಕು ಎಂದು ಒತ್ತಾಯಿಸಲಾಗುವುದು ಎಂದರು.

ಎಲ್ಲಾ ಸಂಶೋಧನಾ ವಿದ್ಯಾರ್ಥಿಗಳಿಗೆ ತಾರತಮ್ಯವಿಲ್ಲದೆ ನಿಯಮಿತ ಫಿಲೋಶಿಪ್‌ನ್ನು ನೀಡಲು ಕ್ರಮಕೈಗೊಳ್ಳಬೇಕು. ಸ್ವಾತಂತ್ರ‍್ಯ ಹೋರಾಟಗಾರರ ಜೀವನವನ್ನು ಪಠ್ಯಕ್ರಮದಲ್ಲಿ ಸೇರಿಸಿ, ಅವೈಜ್ಞಾನಿಕ ವಿಚಾರಗಳನ್ನು ಹರಡುವ ಮತ್ತು ಐತಿಹಾಸಿಕ ಸತ್ಯಗಳನ್ನು ವಿರೂಪಗೊಳಿಸುವುದನ್ನು ನಿಲ್ಲಿಸಬೇಕು. ಸರಕಾರ ಎಲ್ಲರಿಗೂ ಉದ್ಯೋಗವನ್ನು ಖಾತ್ರಿಪಡಿಸಬೇಕು. ಶಿಕ್ಷಣಕ್ಕಾಗಿ ಕೇಂದ್ರ ಬಜೆಟ್‌ನಲ್ಲಿ ಶೇ.10 ಮತ್ತು ರಾಜ್ಯ ಬಜೆಟ್‌ನಲ್ಲಿ ಶೇ.30ರಷ್ಟು ಮೀಸಲಿಟ್ಟು ಒಟ್ಟು ಜಿಡಿಪಿಯ ಶೇ.3 ಮತ್ತು ಬಜೆಟ್‌ನಲ್ಲಿ ಶೇ.3ರಷ್ಟು ಸಂಶೋಧನೆಗಾಗಿ ನಿಗದಿಪಡಿಸುವುದು ಸೇರಿದಂತೆ ವಿವಿಧ ಪ್ರಮುಖ ಬೇಡಿಕೆಗಳು ಈಡೇರಿಸಲು ಒತ್ತಾಯಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ತುಳಜರಾಮ ಎನ್.ಕೆ, ವೆಂಕಟೇಶ ದೇವದುರ್ಗಾ, ಪ್ರೀತಿ ದೊಡ್ಡಮನಿ, ನಾಗರಾಜ ರಾವೂರ ಇತರರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News