ಕಲಬುರಗಿಯಲ್ಲಿ 11 ಗಂಟೆಯವರೆಗೆ 22.63% ಮತದಾನ

Update: 2024-05-07 06:23 GMT

ಕಲಬುರಗಿ: ಕಲಬುರಗಿ ಲೋಕಸಭೆ ಕ್ಷೇತ್ರದಲ್ಲಿ ಬೆಳಿಗ್ಗೆ 11 ಗಂಟೆಯವರೆಗೆ 22.63 ಮತದಾನವಾಗಿದೆ. ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭಗೊಂಡಿದ್ದು, ಸುಡು ಬಿಸಿಲಿನಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ.

ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರು ಗುಲ್ಬರ್ಗಾ ದಕ್ಷಿಣ ಮತ ಕ್ಷೇತ್ರದ ಜಗತ್ ಪ್ರದೇಶದ ಮತಗಟ್ಟೆ ಸಂ.61ರಲ್ಲಿ ಸರದಿಯಲ್ಲಿ ನಿಂತು ಮತ ಚಲಾಯಿಸಿದರು. ಇದೇ ಸಂದರ್ಭದಲ್ಲಿ ಮತ ಚಲಾಯಿಸಲು ಬಂದ ಹಿರಿಯ ನಾಗರಿಕರಿಗೆ ನೆರವಾದರು.

ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ ಅವರು ಗುಲಬರ್ಗಾ ದಕ್ಷಿಣ ಮತಕ್ಷೇತ್ರದ ವ್ಯಾಪ್ತಿಯ‌ ವಿಜಯ ವಿದ್ಯಾಲಯ ಪದವಿ ಪೂರ್ವ ಕಾಲೇಜು ಮತಗಟ್ಟೆ ಸಂ.169ರಲ್ಲಿ ಸರದಿಯಲ್ಲಿ ನಿಂತು ಮತ ಚಲಾಯಿಸಿದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News