ಬಸ್- ಟ್ಯಾಕ್ಟರ್ ಮಧ್ಯೆ ಅಪಘಾತ : ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು
Update: 2025-01-12 17:36 GMT
ಕಲಬುರಗಿ : ಯಡ್ರಾಮಿ ಪಟ್ಟಣದ ಹೊರವಲಯದ ರೇಣುಕಾಚಾರ್ಯ ಗುಡಿ ಸಮೀಪದಲ್ಲಿ ಭಾನುವಾರ ಸಂಜೆ 6.30ರ ಸುಮಾರಿಗೆ ಬಸ್ ಮತ್ತು ಟ್ಯಾಕ್ಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಪ್ರಯಾಣಿಕರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಗಾಯಾಳುಗಳಿಗೆ ಜೇವರ್ಗಿಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಕಲಬುರಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.
ಬಸ್ ಚಾಲಕನಿಗೆ ಮತ್ತು ಕೆಲ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅವರು ಯಡ್ರಾಮಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಗೊತ್ತಾಗಿದೆ. ಈ ಕುರಿತು ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.