ಸೇಡಂ ತಾಲೂಕಿನ ಗುಂಡೇಪಲ್ಲಿ ಸರಕಾರಿ ಡಿಗ್ರಿ ಕಾಲೇಜಿನಲ್ಲಿ ಬಿಎ, ಬಿಕಾಂ ಪದವಿ ತರಗತಿಗಳಿಗೆ ಪ್ರವೇಶ ಪ್ರಕ್ರಿಯೆ ಪ್ರಾರಂಭ

ಸಾಂದರ್ಭಿಕ ಚಿತ್ರ
ಕಲಬುರಗಿ : ಸೇಡಂ ತಾಲೂಕಿನ ಗುಂಡೇಪಲ್ಲಿ ಗ್ರಾಮದ ಪ.ಜಾ./ ಪ.ಪಂ. ವಸತಿಯುಕ್ತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2025-26ನೇ ಶೈಕ್ಷಣಿಕ ಸಾಲಿನಿಂದ ಪದವಿ ತರಗತಿಗಳಾದ ಬಿ.ಎ., (ಇತಿಹಾಸ, ರಾಜ್ಯಶಾಸ್ತ್ರ, ಅರ್ಥಶಾಸ್ತ್ರ, ಸಮಾಜಶಾಸ್ತ್ರ) ಮತ್ತು ಬಿ.ಕಾಂ. ಕೋರ್ಸ್‍ಗಳಿಗೆ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಹ ಅಭ್ಯರ್ಥಿಗಳು ಪ್ರವೇಶ ಪಡೆಯಬೇಕೆಂದು ಗುಂಡೇಪಲ್ಲಿ ಗ್ರಾಮದ ಸರ್ಕಾರಿ ಡಿಗ್ರಿ ಕಾಲೇಜಿನ ಪ್ರಾಚಾರ್ಯರು ತಿಳಿಸಿದ್ದಾರೆ.
ಕಲಬುರಗಿ ಜಿಲ್ಲೆಯ ಏಕೈಕ ಮಾದರಿಯ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗಗಳ ವಸತಿಯುಕ್ತ ಪ್ರಥಮ ದರ್ಜೆ ಕಾಲೇಜು 2023-24ರಲ್ಲಿ ಪ್ರಾರಂಭಗೊಂಡಿದ್ದು, ಗುಲಬರ್ಗಾ ವಿಶ್ವವಿದ್ಯಾಲಯದಿಂದ ಸಂಲಗ್ನತೆಯೊಂದಿಗೆ ಸುಸಜ್ಜಿತ ಆಧುನಿಕ ಶೈಲಿಯಲ್ಲಿ ಕಟ್ಟಡ ಹೊಂದಿದೆ. ಈ ಭಾಗದ ಪಿಯುಸಿ/ಐಟಿಐ ಪಾಸಾದ ವಿದ್ಯಾರ್ಥಿಗಳು ವಿಶೇಷವಾಗಿ ವಿದ್ಯಾರ್ಥಿನಿಯರಿಗೆ ಅನುಕೂಲಕರವಾಗಿದೆ. ಉನ್ನತ ಶಿಕ್ಷಣದಿಂದ ವಂಚಿತರಾದ ಅರ್ಹ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗಗಳ ಹಾಗೂ ಇತರೆ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದಾಗಿದೆ. ಸರ್ಕಾರದ ಎಲ್ಲಾ ರೀತಿಯ ಸೌಲಭ್ಯಗಳು, ಶಿಷ್ಯವೇತನ, ಹಾಗೂ ಎಲ್ಲಾ ವಿದ್ಯಾರ್ಥಿನಿಯರಿಗೆ ಬೋಧನಾ ಶುಲ್ಕದಿಂದ ವಿನಾಯತಿ ಇರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಶರಣು ಇವರ ಮೊಬೈಲ್ ಸಂಖ್ಯೆ 9845478101, 9481614337 ಹಾಗೂ ಕಾಲೇಜಿನ ಅಧೀಕ್ಷಕರ 8105453127 ಮೊಬೈಲ್ ಸಂಖ್ಯೆಗೆ ಸಂಪರ್ಕಿಸಲು ಕೋರಿದೆ.