ಅಫಜಲ್ಪುರ | ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ

Update: 2025-04-28 10:12 IST
Photo of Program
  • whatsapp icon

ಕಲಬುರಗಿ : ಪ್ರಜೆಗಳಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸಿ ದೇಶವನ್ನು ಅಭಿವೃದ್ಧಿ ಮಾಡುವ ಮೂಲಕ ನಾಗರಿಕರಲ್ಲಿ ನೆಮ್ಮದಿ ಮೂಡಿಸುವುದೇ ಒಂದು ಪ್ರಜಾಪ್ರಭುತ್ವ ದೇಶದ ಗುರಿ ಎಂದು ಮಾತೋಶ್ರೀ ಮನೋರಮಾ ಮಧ್ವರಾಜ್ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ಬಸವರಾಜ ನಿಂಬರಗಿ ಹೇಳಿದರು.

ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಅಫಜಲ್ಪುರ ದಲ್ಲಿ ಏರ್ಪಡಿಸಿದ್ದ 2025ನೇ ವರ್ಷದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇಂದಿನ ಯುವಕರು ಸಾಮಾಜಿಕ ಜಾಲತಾಣಗಳ ಮೂಲಕ ಸಾಕಷ್ಟು ಜ್ಞಾನ ಮತ್ತು ಕೌಶಲ್ಯಗಳನ್ನು ಪಡೆಯುತ್ತಿದ್ದಾರೆ. ಆದರೆ ಅದಕ್ಕಿಂತ ಹೆಚ್ಚು ಸಾಮಾಜಿಕ ಜಾಲತಾಣಗಳ ದುರುಪಯೋಗವನ್ನು ಕೂಡ ಮಾಡಿಕೊಳ್ಳುತ್ತಿದ್ದಾರೆ. ಇದರಿಂದಾಗಿ ಇಂದಿನ ಯುವಪೀಳಿಗೆ ದಾರಿ ತಪ್ಪಿರುವುದು ಕಂಡುಬರುತ್ತದೆ. ಇದಕ್ಕೆ ಮಾನವೀಯ ಮೌಲ್ಯಗಳ ಜಾಗೃತಿಯ ಮೂಲಕ ಪರಿಹಾರವನ್ನು ಕಂಡುಕೊಳ್ಳಬೇಕು ಎಂದು ಅವರು ಹೇಳಿದರು.

ಸಿದ್ದರಾಮಪ್ಪ ತಾವರ್ ಖೇಡ ಅವರು ಮುಖ್ಯ ಅತಿಥಿಗಳಾಗಿದ್ದರು. ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷರಾದ ಸಂಗಣ್ಣ ಸಿಂಗೆ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಹಾಯಕ ಪ್ರಾಧ್ಯಾಪಕ ಡಾ.ರಾಘವೇಂದ್ರ ಮಾತನಾಡಿದರು.

ಕಾಲೇಜಿನ ಗೋದಾವರಿ ತಂಡದ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿನಿಯರು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News