ಅಗ್ನಿಪಥ ನೇಮಕಾತಿ: ಆನ್‍ಲೈನ್ ನೋಂದಣಿ ಆರಂಭ

ಸಾಂದರ್ಭಿಕ ಚಿತ್ರ (PTI)
ಕಲಬುರಗಿ: ಆರ್ಮಿ ರಿಕ್ರೂಟಿಂಗ್ ಆಫೀಸ್ ಬೆಳಗಾವಿ ಹಾಗೂ ಬೆಂಗಳೂರು ಹೆಡ್‍ಕ್ವಾಟರ್ಸ್ ರಿಕ್ರೂಟಿಂಗ್ ಜೋನ್ ಬೆಂಗಳೂರು ಇವರ ಸಹಯೋಗದಲ್ಲಿ ಆಗ್ನಿಪಥ ನೇಮಕಾತಿಗಾಗಿ ಇದೇ ಮಾರ್ಚ್ 12 ರಿಂದ ಎಪ್ರಿಲ್ 10ರ ವರೆಗೆ ಆನ್‍ಲೈನ್ ಮೂಲಕ ನೋಂದಣಿ ಪ್ರಕ್ರಿಯೆ ನಡೆಯಲಿದೆ ಎಂದು ಬೆಳಗಾವಿ ಆರ್ಮಿ ರಿಕ್ರೂಟಿಂಗ್ ಕಚೇರಿಯ ಡೈರೆಕ್ಟರ್ ರಿಕ್ರೂಟಿಂಗ್ ಕರ್ನಲ್ ಎ.ಕೆ ಉಪಾಧ್ಯಾಯ ಅವರು ತಿಳಿಸಿದ್ದಾರೆ.
ಬೆಳಗಾವಿ, ಬೀದರ, ಕಲಬುರಗಿ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ಜಿಲ್ಲೆಗಳ ಪುರುಷ ಅಭ್ಯರ್ಥಿಗಳು ಜಾಯಿನ್ ಇಂಡಿಯನ್ ಆರ್ಮಿ www.joinindianarmy.nic.in ವೆಬ್‍ಸೈಟ್‍ನಲ್ಲಿ ನೋಂದಣಿ ಮಾಡಿಕೊಳ್ಳಬೇಕು.
ಅಗ್ನಿವೀರ್ ಜನರಲ್ ಡ್ಯೂಟಿ, ಅಗ್ನಿವೀರ್ ಟೆಕ್ನಿಕಲ್, ಅಗ್ನಿವೀರ್ ಟ್ರೇಡ್ಸ್‍ಮೆನ್ ಹುದ್ದೆಗಳಿಗೆ 10ನೇ ತರಗತಿ ಉತ್ತೀರ್ಣರಾಗಿರಬೇಕು. ಅಗ್ನಿವೀರ್ ಟ್ರೇಡ್ಸ್‍ಮೆನ್ ಹುದ್ದೆಗೆ 8ನೇ ತರಗತಿ ಪಾಸ್ ಆಗಿರಬೇಕು. ಅಗ್ನಿವೀರ್ ಕ್ಲರ್ಕ್/ ಸ್ಟೋರ್ ಕೀಪರ್ ಟೆಕ್ನಿಕಲ್ ವಿಭಾಗಗಳಿಗೆ ನೇಮಕಾತಿ ನಡೆಯಲಿದೆ.
ವಯೋಮಿತಿ, ಶೈಕ್ಷಣಿಕ ಅರ್ಹತೆ ಮತ್ತು ಇನ್ನಿತರ ಹೆಚ್ಚಿನ ಮಾಹಿತಿಗಾಗಿ 2025ರ ಮಾರ್ಚ್ 12 ರಂದು ಬೆಳಗಾವಿ ಆರ್ಮಿ ರಿಕ್ರೂಟಿಂಗ್ ಆಫೀಸ್‍ದಿಂದ ಹೊರಡಿಸಿದ ಅಧಿಸೂಚನೆ ವೀಕ್ಷಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.