ಆಳಂದ | ದರ್ಗಾ ಆವರಣದಲ್ಲಿ ರಾಘವ ಚೈತನ್ಯ ಶಿವಲಿಂಗದ ದೇವಸ್ಥಾನ ನಿರ್ಮಾಣಕ್ಕೆ ಅಡಿಗಲ್ಲು ಹಾಕುತ್ತೇವೆ: ಮುತಾಲಿಕ್

Update: 2024-02-11 10:49 GMT

ಕಲಬುರಗಿ: ಆಳಂದ ಪಟ್ಟಣದ ಪ್ರಸಿದ್ಧ ಸೂಫಿ ಹಝ್ರತ್ ಲಾಡ್ಲೆ ಮಶಾಕ್ (ರ.ಅ) ದರ್ಗಾದ ಆವರಣದಲ್ಲಿ ರಾಘವ ಚೈತನ್ಯ ದೇವಸ್ಥಾನ ನಿರ್ಮಾಣಕ್ಕೆ ಶಿವರಾತ್ರಿ ದಿನದಂದು ಅಡಿಗಲ್ಲು ಹಾಕುತ್ತೇವೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೂರಾರು ವರ್ಷ ಹಿಂದಿನ ಪವಿತ್ರ ಕ್ಷೇತ್ರವಾಗಿದೆ. ಕಳೆದ ವರ್ಷ ನ್ಯಾಯಾಲಯ ಪೂಜೆ ಮಾಡಲು ಅನುಮತಿ ಕೊಟ್ಟಿದೆ. ಆ ಸ್ಥಳದಲ್ಲಿ ಈಶ್ವರ ಲಿಂಗ ಇದ್ದ ಮೇಲೆ ಜೀರ್ಣೋದ್ಧಾರ, ದೇವಸ್ಥಾನ ಮಾಡೋದು ನಮ್ಮ ಕರ್ತವ್ಯ ಅದರ ಮುಂದುವರಿದ ಭಾಗವಾಗಿ ಶಿವರಾತ್ರಿ ದಿನ ಗುದ್ದಲಿ ಪೂಜೆಯಿಂದ ಪ್ರಾರಂಭ ಮಾಡುತ್ತೇವೆ ಎಂದು ಹೇಳಿದ್ದಾರೆ.

ರಾಘವ ಚೈತನ್ಯ ಈಶ್ವರ ಲಿಂಗ ಪ್ರತಿಷ್ಠಾಪನೆ ಮಾಡಿದ ಸ್ಥಳ ಇದಾಗಿದ್ದು, ಅದನ್ನು ಕೆಲವರು ಅತಿಕ್ರಮಣ ಮಾಡಿಕೊಂಡಿದ್ದಾರೆ. ಶಿವರಾತ್ರಿ ದಿನ ಆ ಸ್ಥಳಕ್ಕೆ ಲಕ್ಷಾಂತರ ಜನ ಬಂದು ಪೂಜೆ ಮಾಡುತ್ತೇವೆ. ನಮಗೆ ಭದ್ರತೆ ನೀಡುವುದು ಸರಕಾರದ ಕೆಲಸ , ಸರಕಾರ ತನ್ನ ಕರ್ತವ್ಯ ನಿರ್ವಹಿಸಲಿ ನಾವು ನಮ್ಮ ಕರ್ತವ್ಯ ನಿರ್ವಹಿಸುತ್ತೇವೆ ಎಂದು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News