ಕುಂಕುಮ ಹಚ್ಚಲು ನಿರಾಕರಿಸಿದ ಅಶೋಕ್ | ಬಿಜೆಪಿಯ ಬೂಟಾಟಿಕೆಯ ಹುಸಿ ಧಾರ್ಮಿಕತೆ ಬಯಲು: ಕಾಂಗ್ರೆಸ್ ಟೀಕೆ

Update: 2024-03-25 09:36 GMT

ಬೆಂಗಳೂರು, ಮಾ.25: ಹಣೆಗೆ ಕುಂಕುಮ ಹಚ್ಚಿಕೊಳ್ಳಲು ವಿಪಕ್ಷ ನಾಯಕ ಆರ್. ಅಶೋಕ್ ನಿರಾಕರಿಸಿದ ಘಟನೆ ಕಲಬುರಗಿಯಲ್ಲಿ ರವಿವಾರ ನಡೆದಿದ್ದು, ಇದನ್ನು ಟೀಕಿಸಿರುವ ಕಾಂಗ್ರೆಸ್ ಬಿಜೆಪಿಯವರ ಬೂಟಾಟಿಕೆಯ ಹುಸಿ ಧಾರ್ಮಿಕತೆ ನಾಟಕ ಬಯಲಾಗಿದೆ ಎಂದು ಹೇಳಿದೆ.

ಈ ಬಗ್ಗೆ 'ಎಕ್ಸ್'ನಲ್ಲಿ ವೀಡಿಯೋ ಹಂಚಿಕೊಂಡಿರುವ ಕಾಂಗ್ರೆಸ್, ಆರ್.ಅಶೋಕ್ ಅವರಿಗೆ ಕುಂಕುಮ ಎಂದರೆ ಅಲರ್ಜಿಯೇ, ಅಸಹ್ಯವೇ? ಎಂದು ಪ್ರಶ್ನಿಸಿದೆ. ಕುಂಕುಮ ಹಚ್ಚಲು ಬಂದರೆ ಹೌಹಾರಿ ನಿರಾಕರಿಸುವ ಅಶೋಕ್ ಅವರ ಮೂಲಕ ಬಿಜೆಪಿಯವರ ಬೂಟಾಟಿಕೆಯ ಹುಸಿ ಧಾರ್ಮಿಕತೆ ನಾಟಕ ಬಯಲಾಗಿದೆ ಎಂದು ಹೇಳಿದೆ.

ಕೇಸರಿ ಶಾಲು, ಕುಂಕುಮ ಮುಂತಾದವುಗಳು ಬಿಜೆಪಿಗರ ಯುವ ಸಮುದಾಯವನ್ನು ದಿಕ್ಕು ತಪ್ಪಿಸುವ ಟೂಲ್ ಕಿಟ್ ಹೊರತು ಬಿಜೆಪಿಗರ ಅಸಲಿ ಆಚರಣೆಯಲ್ಲ. ಬೊಮ್ಮಾಯಿಯವರು ಕುಂಕುಮಾವನ್ನು ಉಜ್ಜಿ ಉಜ್ಜಿ ಅಳಿಸಿಕೊಂಡರೆ, ಅಶೋಕ್ ಹಚ್ಚಿಕೊಳ್ಳಲು ನಿರಾಕರಿಸುತ್ತಾರೆ, ನಿಮ್ಮ ನಾಯಕರಿಗೆ ಕುಂಕುಮಕ್ಕಿಂತ ಮೇಕಪ್ ಮುಖ್ಯವೇ ರಾಜ್ಯ ಬಿಜೆಪಿಯನ್ನು ಕಾಂಗ್ರೆಸ್ ಪ್ರಶ್ನಿಸಿದೆ.

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಲೆಪೇಟ್ ನಲ್ಲಿರುವ ಬಿಜೆಪಿ ಕಚೇರಿಗೆ ರವಿವಾರ ಆರ್. ಅಶೋಕ್ ಭೇಟಿ ನೀಡಿದ್ದರು. ಈ ವೇಳೆ ಹಿರಿಯ ಮುಖಂಡರೊಬ್ಬರು ಅವರ ಹಣೆಗೆ ಕುಂಕುಮ ಹಚ್ಚಲು ಮುಂದಾಗಿದ್ದಾರೆ. ಆದರೆ, ಅಶೋಕ್ ಅದಕ್ಕೆ ಅವಕಾಶ ನೀಡದೆ, ಬೇಡ ಎನ್ನುವ ಮೂಲಕ ತಡೆದಿದ್ದಾರೆ. ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು, ವಿಪಕ್ಷ ನಾಯಕನ ನಡೆಗೆ ವಿರೋಧ ವ್ಯಕ್ತವಾಗುತ್ತಿದೆ.


Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News