ಕಲಬುರಗಿ ರಸ್ತೆಯಲ್ಲಿ ಪಾಕಿಸ್ತಾನ ಧ್ವಜ; ಬಜರಂಗದಳ ಕಾರ್ಯಕರ್ತರು ಪೊಲೀಸ್‌ ವಶಕ್ಕೆ

Update: 2025-04-25 13:11 IST
ಕಲಬುರಗಿ ರಸ್ತೆಯಲ್ಲಿ ಪಾಕಿಸ್ತಾನ ಧ್ವಜ; ಬಜರಂಗದಳ ಕಾರ್ಯಕರ್ತರು ಪೊಲೀಸ್‌ ವಶಕ್ಕೆ

ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ

  • whatsapp icon

ಕಲಬುರಗಿ: ನಗರದ ಜಗತ್ ವೃತ್ತದಲ್ಲಿ ಪಾಕಿಸ್ತಾನ ಧ್ವಜವನ್ನು ಅಂಟಿಸಿದ ಬಜರಂಗದಳದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಜರಂಗದಳದ ಕಾರ್ಯಕರ್ತರು ನಗರದ ಜಗತ್ ವೃತ್ತ ಸೇರಿದಂತೆ ನಗರದ ಇತರೆ ಪ್ರಮುಖ ಪ್ರದೇಶಗಳಲ್ಲಿ ಪಾಕ್ ಧ್ವಜಗಳನ್ನು ರಸ್ತೆ, ಶೌಚಾಲಯ ಪ್ರದೇಶಗಳಲ್ಲಿ ಅಂಟಿಸಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಆಗಮಿಸಿದ ಗುಪ್ತಚರ ಇಲಾಖೆ ಸಿಬ್ಬಂದಿ, ಮತ್ತು ಬ್ರಹ್ಮಪುರ ಠಾಣೆಯ ಪೊಲೀಸರು ಅಂಟಿಸಿದ ಧ್ವಜವನ್ನು ತೆರವುಗೊಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ, ಭಯೋತ್ಪಾದನಾ ಕೃತ್ಯ ಖಂಡಿಸಿ, ವಿವಿಧ ಸಂಘಟನೆಗಳು ವಿವಿಧ ರೀತಿಯಲ್ಲಿ ಪ್ರತಿಭಟನೆಗಳು ನಡೆಸುತ್ತಿವೆ. ನಗರದಲ್ಲೂ ಕೆಲ ಕೆಲವರು ಅನುಮತಿ ಇಲ್ಲದೆ ಪಾಕಿಸ್ತಾನ ಧ್ವಜ ಅಂಟಿಸಿರುವುದು ಕಂಡುಬಂದಿದೆ. ಸದ್ಯಕ್ಕೆ ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದ 6 ಮಂದಿ ಬಜರಂಗದಳದ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News