ಜಾತಿ ನಿಂದನೆ ಆರೋಪ: ಶ್ರೀರಾಮ ಸೇನೆಯ ರಾಷ್ಟ್ರೀಯ ಗೌರವಾಧ್ಯಕ್ಷ ಆಂದೋಲಾ ಶ್ರೀ ವಿರುದ್ಧ ಪ್ರಕರಣ ದಾಖಲು

Update: 2025-01-14 06:47 GMT

ಕಲಬುರಗಿ: ಶ್ರೀರಾಮ ಸೇನೆಯ ರಾಷ್ಟ್ರೀಯ ಗೌರವಾಧ್ಯಕ್ಷ ಅಂದೋಲಾದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರ ವಿರುದ್ಧ ಜಾತಿ ನಿಂದನೆ ಮಾಡಿರುವ ಬಗ್ಗೆ ಇಲ್ಲಿನ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಬಗ್ಗೆ ವರದಿಯಾಗಿದೆ.

ಕಲಬುರಗಿಯ ಬಸವ ನಗರದ ನಿವಾಸಿ, ಹೋರಾಟಗಾರ ಅಮಲಪ್ಪ ಭೀಮಪ್ಪ ಹೊಸಮನಿ ಎಂಬುವವರು ಆಂದೋಲಾ ಶ್ರೀ ಸಿದ್ಧಲಿಂಗ ಸ್ವಾಮೀಜಿ ಅವರ ವಿರುದ್ಧ ದೂರು ನೀಡಿದ್ದಾರೆ.

ಸಚಿನ್ ಪಾಂಚಾಳ ಆತ್ಮಹತ್ಯೆ ಕುರಿತು ಸುದ್ಧಿಗೋಷ್ಠಿ ನಡೆಸಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ದಲಿತರಿಗೆ ಅಪಮಾನವಾಗುವ ರೀತಿಯಲ್ಲಿ ಆಂದೋಲಾ ಶ್ರೀ ಮಾತನಾಡಿದ್ದಾರೆ. ಕೂಡಲೇ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ, ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನನ್ವಯ ಸ್ವಾಮೀಜಿ ವಿರುದ್ಧ ಸೋಮವಾರ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News