ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರನ್ನು ಬೀದಿಗೆ ತಂದಿದ್ದಾರೆ: ಬಿ.ವೈ.ವಿಜಯೇಂದ್ರ
Update: 2024-12-05 11:28 GMT
ಯಾದಗಿರಿ : ವಕ್ಫ್ ಮೂಲಕ ರಾಜ್ಯದ ರೈತರನ್ನು ಸಿದ್ದರಾಮಯ್ಯ ಬೀದಿಗೆ ತಂದಿದ್ದಾರೆ ಎಂದು ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಗುರುವಾರ ಶಹಾಪುರ ಪಟ್ಟಣದಲ್ಲಿ ವಕ್ಫ್ ವಿರುದ್ಧದ ಹೋರಾಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರೈತರ ತೊಗರಿ ಬೆಳೆ ಹಾನಿ ಪರಿಹಾರ ಕೊಡುವ ಯೋಗ್ಯತೆ ಈ ಸರಕಾರಕ್ಕೆ ಇಲ್ಲ, ಒಂದು ರೂಪಾಯಿ ಸರಕಾರ ಪರಿಹಾರ ಕೊಟ್ಟಿಲ್ಲ, ರೈತರು ಈಗ ಪರದಾಡುತ್ತಿದ್ದಾರೆ ಎಂದು ಹೇಳಿದರು.
ಬಿಜೆಪಿಯ ಬಣ ಬಡಿದಾಟ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯಲ್ಲಿ ಯಾವುದೇ ಬಣವಿಲ್ಲ ಎಲ್ಲವೂ ಸರಿ ಹೋಗುತ್ತದೆ ಎಂದು ಸ್ಪಷ್ಟಪಡಿಸಿದರು.
ಈ ಸಂದರ್ಭದಲ್ಲಿ ರೇಣುಕಾಚಾರ್ಯ, ಗೋವಿಂದ್ ಕಾರಜೋಳ್, ಶ್ರೀರಾಮುಲು, ರಾಜುಗೌಡ, ಬಿ.ಜಿ.ಪಾಟೀಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.