ಚಿಂಚೋಳಿ | ನೂತನ ನ್ಯಾಯಾಲಯ ನಿರ್ಮಾಣಕ್ಕೆ ಶಾಸಕ ಡಾ.ಅವಿನಾಶ್ ಜಾಧವ್ ಒತ್ತಾಯ
Update: 2025-03-19 22:32 IST

ಕಲಬುರಗಿ : ಚಿಂಚೋಳಿ ತಾಲ್ಲೂಕಿನಲ್ಲಿರುವ ನಿಜಾಮರ ಕಾಲದಲ್ಲಿನ ಪುರಾತನ ನ್ಯಾಯಲಯ ಕಟ್ಟಡವು ಶಿಥಿಲಾವ್ಯವಸ್ಥೆಗೆ ತಲುಪಿದ್ದು, ನೂತನ ಕಟ್ಟಡ ನಿರ್ಮಾಣಕ್ಕೆ ಈಗಾಗಲೇ ಪ್ರಸ್ತಾವನೆ ಹಾಗೂ ಕ್ರಿಯಾಯೋಜನೆ ರೂಪಿಸಲಾಗಿದ್ದು, ಕಟ್ಟಡ ನಿರ್ಮಾಣ ಮಾಡಲು ಪ್ರಸಕ್ತ ಸಾಲಿನಲ್ಲಿ ಅನುದಾನ ಬಿಡುಗಡೆಗೊಳಿಸಿ ಕಾಮಗಾರಿ ಪ್ರಾರಂಭಿಸಲು ಮುಂದಾಗಬೇಕು ಎಂದು ಅಧಿವೇಶನದಲ್ಲಿ ಚುಕ್ಕೆ ಗುರುತಿನ ಪ್ರಶ್ನಾವಳಿಯಲ್ಲಿ ಶಾಸಕ ಡಾ.ಅವಿನಾಶ್ ಜಾಧವ್ ಒತ್ತಾಯಿಸಿದರು.
ಪ್ರಶ್ನೆಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು, ಚಿಂಚೋಳಿಯಲ್ಲಿ 4 ಕೋರ್ಟ್ ಹಾಲ್ ಒಳಗೊಂಡ ಹೊಸ ನ್ಯಾಯಲಯ ನಿರ್ಮಾಣಕ್ಕಾಗಿ ಇಲಾಖೆಯು ತಯಾರಿಸಿದ ಅಂದಾಜು ಪಟ್ಟಿಯಂತೆ 19 ಕೋಟಿ ರೂ.ಗಳು ಮೊತ್ತವಾಗಲಿದ್ದು, ಸದರಿ ಪ್ರಸ್ತಾವನೆಯನ್ನು ಪರಿಶೀಲನೆ ಹಂತದಲ್ಲಿದ್ದು, ಮಳೆಗಾಲದಲ್ಲಿ ಮಳೆ ನೀರು ಸೋರಿಕೆಯಾಗದಂತೆ ತಾತ್ಕಲಿಕ ದುರಸ್ತಿಗಾಗಿ 1.33 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆಗಾಗಿ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಉತ್ತರಿಸಿದರು.