ಭೋವಿ ನಿಗಮದ ಹಣ ದುರ್ಬಳಕೆ ಆರೋಪ | ಬಿಜೆಪಿ ಎಂಎಲ್‌ಸಿ ಸುನೀಲ್ ವಲ್ಲ್ಯಾಪುರ ಮನೆ ಮೇಲೆ ಸಿಐಡಿ ದಾಳಿ
Update: 2024-10-19 11:01 GMT
ಕಲಬುರಗಿ : ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಸುನಿಲ್ ವಲ್ಲ್ಯಾಪುರ ಅವರ ಮನೆಯ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
2022ರಲ್ಲಿ ಸುನೀಲ್ ವಲ್ಲ್ಯಾಪುರ ಅವರ ಪುತ್ರ ವಿನಯ್ ವಲ್ಲ್ಯಾಪುರ ಅವರ ಮೇಲೆ ಭೋವಿ ನಿಗಮದ 12 ಕೋಟಿ ರೂ. ದುರ್ಬಳಕೆ ಮಾಡಿಕೊಂಡಿರುವ ಗಂಭೀರ ಆರೋಪ ಇದೆ.
ಹೀಗಾಗಿ ನ್ಯಾಯಾಲಯದ ಸರ್ಚ್ ವಾರೆಂಟ್‌ನೊಂದಿಗೆ ಬಂದ ಸಿಐಡಿ ಅಧಿಕಾರಿಗಳ ತಂಡ, ಕಲಬುರಗಿ ನಗರದ ಸಂತೋಷ ಕಾಲೊನಿಯಲ್ಲಿರುವ ವಾಲ್ಲ್ಯಾಪುರ ಅವರ ನಿವಾಸದಲ್ಲಿ ದಾಳಿ ನಡೆಸಿ, ಕಡತಗಳನ್ನು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.