ಖ್ಯಾತ ವಿದ್ವಾಂಸ ಡಾ.ಸೈಯದ್ ಶಾಹ್ ಖುಸ್ರೋ ಹುಸೈನಿ ಅವರ ನಿಧನಕ್ಕೆ ಶಶೀಲ್ ನಮೋಶಿ ಸಂತಾಪ

Update: 2024-11-07 15:38 GMT

ಕಲಬುರಗಿ : ಖ್ಯಾತ ವಿದ್ವಾಂಸ ಡಾ.ಸೈಯದ್ ಶಾಹ್ ಖುಸ್ರೋ ಹುಸೈನಿ ನಿಧನಕ್ಕೆ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಅವರು ಸಂತಾಪ ಸೂಚಿಸಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಹಿತಕ್ಕಾಗಿ 1958 ರಲ್ಲಿ ಖ್ವಾಜಾ ಎಜುಕೇಶನ್ ಸೊಸೈಟಿ ಎಂಬ ಶಿಕ್ಷಣ ಸಂಸ್ಥೆಯನ್ನು ಪ್ರಾರಂಭಿಸಲಾಯಿತು. ಆದರೆ ಈಗ ಸಂಸ್ಥೆ ಜಾತಿ, ಮತ, ಧರ್ಮ ಭೇದವಿಲ್ಲದೆ ಎಲ್ಲರ ಉನ್ನತಿಗಾಗಿ ಶ್ರಮಿಸುತ್ತಿದೆ. ಪ್ರಾಥಮಿಕ, ಪ್ರೌಢ ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳನ್ನು ಒಳಗೊಂಡಿರುವ 24ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳು ಹೊಂದಿದೆ. ಈ ಮಟ್ಟಕ್ಕೆ ಬೆಳೆಸಲು ಡಾ. ಖುಸ್ರೋ ಅವರ ಕೊಡುಗೆ ಬಹಳಷ್ಟಿದೆ ಎಂದಿದ್ದಾರೆ.

ದರ್ಗಾ ಮತ್ತು ಸೊಸೈಟಿಯ ಅಧ್ಯಕ್ಷರಾದ ಡಾ. ಖುಸ್ರೋ ಹುಸೈನಿ ಅವರ ದೂರದೃಷ್ಟಿಯು "ಖಾಜಾ ಬಂದೇ ನವಾಜ್ ವಿಶ್ವವಿದ್ಯಾಲಯ (ಕೆಬಿಎನ್‌ಯು)" ಎಂಬ ಹೆಸರಿನ ವಿಶ್ವವಿದ್ಯಾಲಯವನ್ನು ಸ್ಥಾಪಿಸುವುದಲ್ಲದೆ, ವೈದ್ಯಕೀಯ, ಇಂಜಿನಿಯರಿಂಗ್, ಬಿ.ಇಡಿ ಕಾಲೇಜುಗಳನ್ನು ಪ್ರಾರಂಭಿಸುವ ಮೂಲಕ ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದರು. ಮುಸ್ಲಿಂ ಮಹಿಳೆಯರ ಶಿಕ್ಷಣ ಗಗನಕುಸುಮವಾಗಿರುವ ಸಂದರ್ಭದಲ್ಲಿ ಮಹಿಳೆಯರ ವಿದ್ಯಾಭ್ಯಾಸಕ್ಕೆ ಒತ್ತು ನೀಡಿದ್ದ ಸೈಯದ್ ಶಾಹ್ ಖುಸ್ರೋ ಹುಸೈನಿ ಮಹಿಳೆಯರಿಗಾಗಿಯೇ ಪ್ರೌಢಶಾಲೆ, ಪದವಿ, ಪದವಿಪೂರ್ವ ಹಾಗೂ ಅರೇಬಿಕ್ ಭಾಷೆಯ ಕಾಲೇಜುಗಳನ್ನು ಪ್ರಾರಂಭಿಸಿದ ಕೀರ್ತಿ ಇವರದ್ದಾಗಿದೆ ಎಂದು ತಿಳಿಸಿದ್ದಾರೆ.

ಖ್ವಾಜಾ ಬಂದೇ ನವಾಝ್ ದರ್ಗಾವನ್ನು ಹಿಂದೂ - ಮುಸ್ಲಿಂ ಸೌಹಾರ್ದತೆಯ ಕೊಂಡಿಯನ್ನಾಗಿಸಿ, ನಾಡಿನ ಭಾವೈಕ್ಯ ಪರಂಪರೆಯನ್ನು ಮುನ್ನಡೆಸಿಕೊಂಡು ಬಂದ ಅವರು, ಸದಾಕಾಲ ಸಮಾಜದ ಒಳಿತನ್ನೇ ಬಯಸುತ್ತಿದ್ದರು ಎಂದು ತಿಳಿಸಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News