ಬೆಳೆಹಾನಿ | ಮೊದಲ ಕಂತಿನ ಹಣ ಬಿಡುಗಡೆ : ಸಚಿವ ಪ್ರಿಯಾಂಕ್ ಖರ್ಗೆ

Update: 2024-11-05 13:58 GMT

ಪ್ರಿಯಾಂಕ್ ಖರ್ಗೆ

ಕಲಬುರಗಿ : 2024-25ನೇ ಸಾಲಿನ ಮುಂಗಾರು ಹಂಗಾಮಿನ ಭಾರೀ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆ ಹಾನಿಯ ಮೊದಲ ಕಂತಿನ ಪರಿಹಾರವಾಗಿ ರೂ 13.2 ಕೋಟಿ ರೂ.ಇನ್ ಪುಟ್ ಸಬ್ಸಿಡಿ ಮಂಜೂರಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ವಿವರಗಳನ್ನು ತಂತ್ರಾಂಶದಲ್ಲಿ ಗ್ರಾಮ ಆಡಳಿತಾಧಿಕಾರಿಗಳು ನಮೂದಿಸಿ ಅನುಮೋದಿಸಿರುತ್ತಾರೆ ಎಂದರು.

ಮೊದಲ ಹಂತದಲ್ಲಿ ಒಟ್ಟು 33,718 ರೈತ ಫಲಾನುಭವಿಗಳಿಗೆ ರೂ 13.2 ಕೋಟಿ ರೂ.ಗಳನ್ನು ಸರಕಾರದ ಎನ್. ಡಿ.ಆರ್. ಎಫ್ ಹಾಗೂ ಎಸ್.ಡಿ.ಆರ್.ಎಫ್ ಮಾರ್ಗಸೂಚಿಯನ್ವಯ ಹಣ ಮಂಜೂರಾತಿ ನೀಡಲಾಗಿದ್ದು, ಸದರಿ ಇನ್ ಪುಟ್ ಸಬ್ಸಿಡಿಯನ್ನು ನೇರವಾಗಿ ಆಧಾರ ಸಂಖ್ಯೆಗೆ ಜೋಡಣೆ ಹೊಂದಿರುವ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲು ಅನುಮೋದನೆ ನೀಡಲಾಗಿದೆ. ಸದರಿ ಇನ್ ಪುಟ್ ಸಬ್ಸಿಡಿ 3-4 ದಿನಗಳ ಒಳಗಾಗಿ ಸಂಬಂಧಪಟ್ಟ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರ ಹಣ ಜಮೆ ಮಾಡಲಾಗುವುದು ಎಂದು ಸಚಿವ ಖರ್ಗೆ ಅವರು ಹೇಳಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News