ಕಲಬುರಗಿ| ಬೆಂಬಲ ಬೆಲೆ ಯೋಜನೆಯಡಿ ಕುಸಬೆ ಖರೀದಿ: ನೋಂದಣಿಗೆ ಡಿಸಿ ಫೌಝಿಯಾ ತರನ್ನುಮ್ ಸೂಚನೆ

Update: 2025-03-15 17:34 IST
ಕಲಬುರಗಿ| ಬೆಂಬಲ ಬೆಲೆ ಯೋಜನೆಯಡಿ ಕುಸಬೆ ಖರೀದಿ: ನೋಂದಣಿಗೆ ಡಿಸಿ ಫೌಝಿಯಾ ತರನ್ನುಮ್ ಸೂಚನೆ

ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಝಿಯಾ ತರನ್ನುಮ್

  • whatsapp icon

ಕಲಬುರಗಿ: 2024-25ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ. ಗುಣಮಟ್ಟದ ಕುಸಬೆ ಖರೀದಿಗಾಗಿ ಕಲಬುರಗಿ ಜಿಲ್ಲೆಯಲ್ಲಿ ಪ್ರತಿ ತಾಲ್ಲೂಕಿಗೆ 01 ರಂತೆ ಜಿಲ್ಲೆಯಲ್ಲಿ ಒಟ್ಟು 10 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಖರೀದಿ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಝಿಯಾ ತರನ್ನುಮ್ ಅವರು ತಿಳಿಸಿದ್ದಾರೆ.

ಎಫ್.ಎ.ಕ್ಯೂ. (FAQ) ಗುಣಮಟ್ಟದ ಕುಸುಬೆ ಪ್ರತಿ ಎಕರೆಗೆ 05 ಕ್ವಿಂಟಲ್‍ನಂತೆ ಹಾಗೂ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಲ್‍ವರೆಗೆ ಖರೀದಿಸಲು ಬೆಂಬಲ ಬೆಲೆ 5940 ರೂ. ನಿಗದಿಪಡಿಸಲಾಗಿದೆ. ಮೊತ್ತವನ್ನು ಡಿ.ಬಿ.ಟಿ. ಮೂಲಕ ರೈತರ ಬ್ಯಾಂಕ ಖಾತೆಗೆ ಜಮಾ ಮಾಡಲಾಗುತ್ತದೆ. ತಕ್ಷಣದಿಂದ ಜಾರಿಗೆ ಬರುವಂತೆ ರೈತರ ನೊಂದಣಿ ಕಾರ್ಯವನ್ನು ಸರ್ಕಾರದ ಆದೇಶದ ದಿನಾಂಕದಿಂದ 80 ದಿನಗಳವರೆಗೆ ಹಾಗೂ ಖರೀದಿ ಪ್ರಕ್ರಿಯೆ ಸರ್ಕಾರದ ಆದೇಶದ ದಿನಾಂಕದಿಂದ 90 ದಿನಗಳವರೆಗೆ ಜರುಗಲಿದ್ದು, ರೈತರು ತಮ್ಮ ಸಮೀಪದ ಖರೀದಿ ಕೇಂದ್ರಕ್ಕೆ ಭೇಟಿ ನೀಡಿ ತಾವು ಬೆಳೆದ ಕುಸುಬೆ ಮಾರಾಟಕ್ಕೆ ನೊಂದಾಯಿಸಿಕೊಂಡು ಇದರ ಸದುಪಯೋಗ ಪಡೆದುಕೊಳ್ಳಬೇಕು.

ಸರ್ಕಾರಿ ಆದೇಶದನ್ವಯ ಜಿಲ್ಲಾ ಮಟ್ಟದ ಟಾಸ್ಕ್‍ಘೋರ್ಸ್ ಸಭೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ. ಗುಣಮಟ್ಟದ ಕುಸುಬೆ ಖರೀದಿ ಮಾಡಲು ಕರ್ನಾಟಕ ಸಹಕಾರ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳ ನಿಯಮಿತ (ಏಔಈ) ಸಂಸ್ಥೆಗೆ ನೋಡಲ್ ಏಜೆನ್ಸಿಗಳನ್ನಾಗಿ ನೇಮಿಸಿದೆ ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News