ಸಿಎಂ ಯಾವುದೇ ತಪ್ಪು ಮಾಡಿಲ್ಲ, ಹೆದರುವ ಪ್ರಶ್ನೆಯೇ ಇಲ್ಲ : ಡಿಸಿಎಂ ಡಿ.ಕೆ.ಶಿವಕುಮಾರ್

Update: 2024-08-20 09:39 GMT

ಕಲಬುರಗಿ : ಮುಡಾ ಹಗರಣ ನಮ್ಮ ಸರಕಾರದಲ್ಲಿ ಮಾತ್ರ ನಡೆದಿಲ್ಲ. ಈ ಹಗರಣದ ತನಿಖೆಗೆ ಈಗಾಗಲೇ ಮುಖ್ಯಮಂತ್ರಿಗಳು ಆದೇಶ ನೀಡಿದ್ದು, ಹೆದರುವ ಪ್ರಶ್ನೆಯೇ ಇಲ್ಲ ಎಂದು ಉಪ ಮುಖ್ಯಮಂತ್ರಿಗಳು ಡಿ.ಕೆ.ಶಿವಕುಮಾರ್‌ ಹೇಳಿದರು.

ಮಂಗಳವಾರ ಕಲಬುರಗಿ ನಗರದ ಪಿ.ಡಿ.ಎ.ಕಾಲೇಜಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಆಯೋಜಿಸಲಾಗಿರುವ ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ ಕಾರ್ಯಕ್ರಮ ಉದ್ಘಾಟನೆ ಮತ್ತು ಸರಕಾರಿ ಸೌಲಭ್ಯ ವಿತರಣೆ ಕಾರ್ಯಕ್ರಮಕ್ಕೆ ಆಗಮಿಸಿ ಐವನ್ ಶಾಹಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

"ಟೀಕೆಗಳು ಸಾಯುತ್ತದೆ, ಕೆಲಸ ಉಳಿಯುತ್ತದೆ. ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ. ಇಡೀ ಕಾಂಗ್ರೆಸ್ ಪಕ್ಷ ಸಿಎಂ ಜೊತೆ ನಿಂತಿದ್ದು, ನಮ್ಮ ಸರಕಾರ ಇನ್ನೂ ಹತ್ತು ವರ್ಷ ಆಡಳಿತ ನೀಡಲಿದೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್, ಕಲಬುರಗಿ ಸಂಸದ ರಾಧಾಕೃಷ್ಣ ದೊಡ್ಡಮನಿ‌, ಶಾಸಕಿ ಕನೀಝ್ ಫಾತೀಮಾ, ಎಂ.ವೈ.ಪಾಟೀಲ್, ವಿಧಾನ ಪರಿಷತ್ ಸದಸ್ಯ ಜಗದೇವ್ ಗುತ್ತೇದಾರ್ ಸೇರಿದಂತೆ ಹಲವರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News