ʼಕೆಕೆಆರ್‌ಡಿʼನಲ್ಲಿ ನಡೆದ ಅವ್ಯವಹಾರ ಸಿಬಿಐಗೆ ವಹಿಸುವಂತೆ ಆಗ್ರಹ

Update: 2024-11-12 11:37 GMT

ಕಲಬುರಗಿ : ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿ 2013ರಿಂದ 2023ರವರೆಗೆ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಹಾಗೂ ಅವ್ಯವಹಾರ ಕುರಿತು ಸಿಬಿಐ ಅಥವಾ ಈಡಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ರಾಜ್ಯಪಾಲರ ಬಳಿ ಬಿಜೆಪಿ ನಿಯೋಗ ತೆರಳಲಿದೆ ಎಂದು ಸೇಡಂ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೆಲ್ಕೂರ್ ತಿಳಿಸಿದ್ದಾರೆ.

ನಗರದ ಪತ್ರಿಕಾಭವನದಲ್ಲಿ ಸುದ್ಧಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘದಲ್ಲಿ 1,200 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಕಾಂಗ್ರೆಸ್ ನವರು ಆರೋಪಿಸಿದ್ದಾರೆ. ಆದರೆ ಈ ಸಂಘಕ್ಕೆ ನಮ್ಮ ಸರಕಾರದಲ್ಲಿ ಕೇವಲ 300 ಕೋಟಿ ರೂ. ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಗಿತ್ತು. ಹೀಗಾಗಿ ಇವರ ಆರೋಪದಲ್ಲಿ ಹುರುಳಿಲ್ಲ ಎಂದರು.

ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರ ಕುರಿತು ನಿವೃತ್ತ ಐಎಎಸ್ ಅಧಿಕಾರಿ ಡಾ.ಇ.ವಿ.ರಮಣರೆಡ್ಡಿ ತನಿಖೆ ಏನಾಯ್ತು? ಈಗ ಸುಧೀರ್ ಕುಮಾರ್ ಅವರನ್ನು ನೇಮಕ ಮಾಡಿದ್ದು ಏಕೆ? ಎಂದು ಪ್ರಶ್ನಿಸಿದರು.

ಶಾಸಕ ಬಸವರಾಜ ಮತ್ತಿಮಡು, ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ, ಚಂದು ಪಾಟೀಲ್, ನಿತಿನ್ ಗುತ್ತೇದಾರ, ಚಂದ್ರಶೇಖರ ರೆಡ್ಡಿ, ಸಂತೋಷ ಹಾದಿಮನಿ ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News