ಅಂಬೇಡ್ಕರ್ ಪ್ರತಿಮೆಗೆ ಅಪಮಾನ: ಇಬ್ಬರು ಶಂಕಿತರು ವಶಕ್ಕೆ?

Update: 2024-01-23 17:12 GMT

ಕಲಬುರಗಿ: ನಗರದ ಹೊರವಲಯದಲ್ಲಿನ ಕೋಟನೂರ್(ಡಿ) ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ಅಪಮಾನ ಮಾಡಿದ್ದರಿಂದ ದಲಿತ ಸಂಘಟನೆಗಳು ನಗರದಲ್ಲಿ ಮಂಗಳವಾರ ವಿವಿಧೆಡೆ ರಸ್ತೆ ತಡೆ ಚಳುವಳಿ, ಟೈರ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಅಂಬೇಡ್ಕರ್ ಅವರ ಪುತ್ಥಳಿಗೆ ಅವಮಾನ ಮಾಡಿದ ಸಂಗತಿ ತಿಳಿಯುತ್ತಿದ್ದಂತೆಯೇ ದಲಿತ ಸಂಘಟನೆಯ ಮುಖಂಡರು ಹೆದ್ದಾರಿ ತಡೆದು ಚಳುವಳಿ ನಡೆಸಿದರು.

ಫರತಾಬಾದ್, ಜೇವರ್ಗಿ ಕ್ರಾಸ್, ಸರ್ದಾರ್ ವಲ್ಲಭಬಾಯಿ ಪಟೇಲ್ ವೃತ್ತ, ಜಗತ್ ಸರ್ಕಲ್ ಸೇರಿದಂತೆ ನಗರ ಸೇರಿದಂತೆ ಜಿಲ್ಲಾದ್ಯಂತ ಬೃಹತ್ ಪ್ರತಿಟನೆಗಳು ನಡೆದವು. ಮಳಿಗೆಗಳು ಬಂದ್ ಮಾಡಿಸಿ ಟೈರ್ ಗೆ ಬೆಂಕಿ ಹಚ್ಚಿ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿದರು.

ಪ್ರತಿಭಟನೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಪ್ರತಿಭಟನಾಕಾರರು ಎಲ್ಲ ವಾಹನಗಳನ್ನು ತಡೆದರು. ಪರಿಣಾಮ ಸಾರಿಗೆ ಸಂಸ್ಥೆಯ ಬಸ್‍ಗಳ ಸಂಚಾರ ಸ್ಥಗಿತಗೊಂಡಿತು. ಆಟೋ, ದ್ವಿಚಕ್ರವಾಹನಗಳು, ಕಾರುಗಳು ಸೇರಿದಂತೆ ಎಲ್ಲ ವಿಧದ ವಾಹನಗಳ ಸಂಚಾರಕ್ಕೆ ನಿರ್ಬಂಧಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News