ಶೋಷಿತರ ವಿಮೋಚನೆಗೆ ಡಾ.ಅಂಬೇಡ್ಕರ್ ಕೊಡುಗೆ ಅಪಾರ : ತೇಗಲತಿಪ್ಪಿ

Update: 2024-12-06 11:57 GMT

ಕಲಬುರಗಿ : ಬಹು ಸಂಸ್ಕೃತಿ ಮತ್ತು ಸರ್ವ ಜನರ ಹಿತ ಕಾಪಾಡುವ ನಿಟ್ಟಿನಲ್ಲಿ ನಮ್ಮ ದೇಶಕ್ಕೆ ಅಮೂಲ್ಯವಾದ ಸಂವಿಧಾನ ರಚಿಸಿದ ಡಾ.ಬಾಬಾ ಸಾಹೇಬ ಅಂಬೇಡ್ಕರ್ ರವರ ತ್ಯಾಗ ಸದಾ ಸ್ಮರಣೀಯ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹೇಳಿದ್ದಾರೆ.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಗರದ ಕನ್ನಡ ಭವನದಲ್ಲಿ ಶುಕ್ರವಾರ ಹಮ್ಮಿಕೊಂಡ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ ಮಹಾ ಪರಿನಿರ್ವಾಣ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಹಿಳೆಯರಿಗೆ ಸಮಾನವಕಾಶ ಕೊಟ್ಟು ಅವರ ವಿಮೋಚನೆಗೆ ಶ್ರಮಿಸಿದ ಮಹಾನ್ ಚೇತನ ಅಂಬೇಡ್ಕರ್ ರಾಗಿದ್ದಾರೆ. ಪ್ರತಿಯೊಬ್ಬರಿಗೂ ಸಮಾನತೆ ಕಲ್ಪಿಸಿ, ಸಾಮಾಜಿಕ ನ್ಯಾಯ ಎತ್ತಿ ಹಿಡಿದವರು. ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬಂದಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ನಮಗೆ ಸಂದೇಶ ನೀಡಿದ್ದಾರೆ. ಅವರ ಜೀವನ ಸಂದೇಶಗಳು ಜೀವನದಲ್ಲಿ ಅಳವಡಿಸಿಕೊಂಡು ಪ್ರಬುದ್ಧ ಭಾರತ ಕಟ್ಟಲು ಮುಂದಾಗಬೇಕು. ಹಾಗೂ ಅವರ ಕಂಡ ಕನಸುಗಳನ್ನು ನನಸು ಮಾಡಲು ಶ್ರಮಿಸಬೇಕಾಗಿದೆ ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲೆಯಲ್ಲಿ ಡಾ.ಅಂಬೇಡ್ಕರ್ ರವರ ಸಂವಿಧಾನದ ಆಶಯಗಳಡಿ ನುಡಿ ಸೇವೆ ಮಾಡುತ್ತಾ ಬರುತ್ತಿದೆ. ಮತ್ತು ಸಾಮಾಜಿಕ ನ್ಯಾಯ ಹಾಗೂ ಜಾತ್ಯತೀತ ಪರಿಕಲ್ಪನೆಯಲ್ಲಿ ಕನ್ನಡ ಕಟ್ಟುವ ಕೆಲಸ ನಿರಂತರವಾಗಿ ನಡೆದಿವೆ. ಬುದ್ಧ, ಬಸವ, ಡಾ.ಅಂಬೇಡ್ಕರ್ ರವರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳುವ ಮೂಲಕ ಪರಿಷತ್ತು ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.

ಜಿಲ್ಲಾ ಕಸಾಪದ ಗೌರವ ಕಾರ್ಯದರ್ಶಿ ಶಿವರಾಜ ಎಸ್ ಅಂಡಗಿ, ಪ್ರಮುಖರಾದ ಡಾ.ರೆಹಮಾನ್ ಪಟೇಲ್, ರವೀಂದ್ರಕುಮಾರ ಭಂಟನಳ್ಳಿ, ರಾಜೇಂದ್ರ ಮಾಡಬೂಳ, ರೇವಣಸಿದ್ದಪ್ಪ ಜೀವಣಗಿ, ಪದ್ಮಾವತಿ ನಾಯಕ್, ಎಂ.ಎನ್.ಸುಗಂಧಿ, ಆರ್.ವಿ. ಕುಲಕರ್ಣೀ, ಜೆ.ಎನ್‌.ಜಾನಕರ್, ಜಯಮಿತ್ರ, ಶಾಂತಕುಮಾರ ಸ್ವಾಮಿ, ಮಲ್ಲಿಕಾರ್ಜುನ ಸ್ವಾಮಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News