ಡಾ.ಬಾಬು ಜಗಜೀವನರಾಂ, ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ವಿಜೃಂಭಣೆಯಿಂದ ಆಚರಣೆ : ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನಮ್

Update: 2025-03-25 22:45 IST
Photo of Metting
  • whatsapp icon

ಕಲಬುರಗಿ : ಹಸಿರು ಕ್ರಾಂತಿಯ ಹರಿಕಾರ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತ್ಯೋತ್ಸವನ್ನು ಕಲಬುರಗಿ ನಗರ ಹಾಗೂ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಕ್ರಮವಾಗಿ ಏ.5 ಮತ್ತು 14ರಂದು ವಿಜೃಂಭಣೆಯಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ತಿಳಿಸಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸದರಿ ಜಯಂತಿಗಳ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡುತ್ತಾ, ಶಾಲಾ ಕಾಲೇಜುಗಳಲ್ಲಿ, ಕಚೇರಿಗಳಲ್ಲಿ, ನಾಡಕಚೇರಿ, ತಾಲೂಕು ಪಂಚಾಯತ್, ಗ್ರಾಮಪಂಚಾಯತ್‍ಗಳಲ್ಲಿ ಜಯಂತಿಗಳ ಆಚರಣೆ ಮಾಡಬೇಕೆಂದು ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಡಾ.ಬಾಬು ಜಗಜೀವನರಾಂ ಅವರ 118ನೇ ಜಯಂತ್ಯೋತ್ಸವದ ಅಂಗವಾಗಿ ಏ.5 ರಂದು ಬೆಳಿಗ್ಗೆ 9 ಗಂಟೆಗೆ ಟೌನ್ ಹಾಲ್‍ನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ನಂತರ ಮೆರವಣಿಗೆ ಮಾಡಲಾಗುವುದು ಎಂದರು.

ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ 134ನೇ ಜಯಂತ್ಯೋತ್ಸವದ ಅಂಗವಾಗಿ ಏಪ್ರಿಲ್ .14ರಂದು ಬೆಳಿಗ್ಗೆ 8.30 ಗಂಟೆಗೆ ಜಗತ್ ವೃತ್ತದ ಬಳಿ ಇರುವ ಡಾ.ಬಾಬಾಸಾಹೇಬ್‌ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು. ಮೆರವಣಿಗೆ ಬೇಕಾಗುವ ಎಲ್ಲ ರೀತಿಯ ಸಕಲಸಿದ್ಥತೆಗಳನ್ನು ಮಾಡಲಾಗುವುದು ಎಂದು ಅವರು ತಿಳಿಸಿದರು.

ಹೆಣ್ಣು ಮಕ್ಕಳು ಮೆರವಣೆಗೆಯಲ್ಲಿ ಭಾಗವಹಿಸುತ್ತಿದ್ದು, ಅವರಿಗೂ ಸಹ ಯಾವುದೇ ತೊಂದರೆ ಆಗದಂತೆ ಪೋಲಿಸ್ ತಂಡಗಳನ್ನು ರಚಿಸಿ, ಬಂದೋಬಸ್ತ್ ಒದಗಿಸಬೇಕೆಂದು ಸೂಚಿಸಿದರು.

ಈ ಎರಡು ಜಯಂತಿಯಗಳ ಆಚರಣೆಗೆ ಸಂಬಂಧಿಸಿದಂತೆ ಎಲ್ಲಾ ಕೆಲಸ-ಕಾರ್ಯಗಳನ್ನು ಕಟ್ಟುನಿಟ್ಟಾಗಿ ತಪ್ಪದೇ ಜವಾಬ್ದಾರಿಯಿಂದ ಕೈಗೊಳ್ಳಬೇಕು. ಜಯಂತಿ ಆಚರಣೆ ಸಂದರ್ಭದಲ್ಲಿ ಪ್ರತಿ ವರ್ಷದಂತೆ ಮಹಾನಗರ ಪಾಲಿಕೆ ವತಿಯಿಂದ ನಗರದ ಪ್ರಮುಖ ಸ್ಥಳಗಳಲ್ಲಿ ದೀಪಾಲಂಕಾರ, ಸೇರಿದಂತೆ ಎಲ್ಲಾ ರೀತಿಯ ಸೌಕರ್ಯವನ್ನು ಯಾವುದೇ ತೊಂದರೆ ಬಾರದಂತೆ ನೋಡಿಕೊಳ್ಳುವಂತೆ ತಿಳಿಸಿದರು.

ಮಹಾನಗರ ಪಾಲಿಕೆಯ ಆಯುಕ್ತ ಅವಿನಾಶ ಶಿಂಧೆ, ಡಿಸಿಪಿ ಕನಿಕಾ ಸಿಕ್ರಿವಾಲ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಹೆಚ್ಚುವರಿ ಪೋಲೀಸ್ ವರಿಷ್ಠಾಧಿಕಾರಿ ಮಹೇಶ ಮೇಘಣ್ಣನವರ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಲಕ್ಷ್ಮಣ ಶೃಂಗೇರಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಎಂ. ಅಲ್ಲಾಭಕ್ಷ, ಡಾ. ಬಾಬು ಜಗಜೀವನರಾಂ ಜಯಂತ್ಯೋತ್ಸವ ಸಮಿತಿಯ ಅಧ್ಯಕ್ಷರಯ ಕಲಬುರ್ಗಿ, ಡಾ.ಬಿ.ಆರ್.ಅಂಬೇಡ್ಕರ್ ಜಯಂತೋತ್ಸವ ಸಮಿತಿ ಅಧ್ಯಕ್ಷರು ಸಭೆಯಲ್ಲಿ ಹಿರಿಯರಾದ ಅಂಬರಾಯ ಅಷ್ಟಗಿ, ರಮೇಶ ಲಂಡನಕರ್, ಎಸ್/ಎಸ್.ಟಿ. ನೌಕರರ ಸಂಘದ ಅಧ್ಯಕ್ಷ ಮಹೇಶ ಹುಬಳ್ಳಿ. ಸುಖೇಂದ್ರ ತಾವಡೆ, ಸುರೇಶ್ ಹಾದಿಮನಿ ಸೇರಿದಂತೆ ಸಮಾಜದ ಇನ್ನಿತರ ಮಖಂಡರು ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News