ಕಲಬುರಗಿ | ವೈದ್ಯಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷರಾಗಿ ಡಾ.ಶರಣಬಸಪ್ಪ ಆಯ್ಕೆ

Update: 2025-03-26 18:16 IST
ಕಲಬುರಗಿ | ವೈದ್ಯಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷರಾಗಿ ಡಾ.ಶರಣಬಸಪ್ಪ ಆಯ್ಕೆ
  • whatsapp icon

ಕಲಬುರಗಿ : ಕರ್ನಾಟಕ ರಾಜ್ಯ ಸರಕಾರಿ ವೈದ್ಯಾಧಿಕಾರಿಗಳ ಸಂಘ ಕಲಬುರಗಿ ಜಿಲ್ಲೆಯ 2025-27ರ ಅವಧಿಗೆ ನಡೆದ ಪದಾಧಿಕಾರಿಗಳ ಚುನಾವಣೆಯಲ್ಲಿ ಕಲಬುರಗಿ ಜಿಲ್ಲೆಯ ಕರ್ನಾಟಕ ರಾಜ್ಯ ಸರಕಾರಿ ವೈದ್ಯಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷರಾಗಿ ಡಾ.ಶರಣಬಸಪ್ಪ ಗಣಜಲಖೇಡ್ ಅವರು ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಚುನಾವಣಾಧಿಕಾರಿ ಡಾ.ರಘುನಾಥರಾವ್ ತಿಳಿಸಿದ್ದಾರೆ.

ಇದೇ ವೇಳೆ ಕಲಬುರಗಿ ಜಿಲ್ಲೆಯ ಕರ್ನಾಟಕ ರಾಜ್ಯ ಸರಕಾರಿ ವೈದ್ಯಾಧಿಕಾರಿಗಳ ಸಂಘದ ಜಿಲ್ಲಾ ನಗರ ಉಪಾಧ್ಯಕ್ಷರಾಗಿ ಡಾ.ವಿನೋದಕುಮಾರ, ಗ್ರಾಮೀಣ ಉಪಾಧ್ಯಕ್ಷರಾಗಿ ಡಾ.‌ಇರ್ಫಾನ್ ಅಲಿ, ಕಾರ್ಯದರ್ಶಿಯಾಗಿ ಡಾ.ಸಂತೋಷ ಅಲಗೂರು, ಖಜಾಂಚಿಯಾಗಿ ಡಾ.ದೀಪಕಕುಮಾರ ರಾಠೋಡ, ಸಹ ಕಾರ್ಯದರ್ಶಿಯಾಗಿ ಡಾ.ಸಂದ್ಯಾ ಡಾಂಗೆ, ಡಾ.ಅಮೃತಾ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು.

ನಂತರ ಚುನಾವಣೆಯಲ್ಲಿ ಆಯ್ಕೆಯಾದ ಕರ್ನಾಟಕ ರಾಜ್ಯ ವೈದ್ಯಾಧಿಕಾರಿಗಳ ಸಂಘದ ಕಲಬುರಗಿ ಜಿಲ್ಲಾ ಪದಾಧಿಕಾರಿಗಳಿಗೆ ಸನ್ಮಾನಸಿ ಗೌರವಿಸಲಾಯಿತು.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News