ಕಲಬುರಗಿ: ಸಾಲಬಾಧೆಯಿಂದ ರೈತ ಆತ್ಮಹತ್ಯೆ

Update: 2025-02-26 20:07 IST
ಕಲಬುರಗಿ: ಸಾಲಬಾಧೆಯಿಂದ ರೈತ ಆತ್ಮಹತ್ಯೆ
  • whatsapp icon

ಕಲಬುರಗಿ: ಸಾಲಬಾಧೆಯಿಂದ ಜಮೀನಿನಲ್ಲಿ ನೇಣು ಬಿಗಿದುಕೊಂಡು ರೈತನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಮಲಾಪುರ ತಾಲ್ಲೂಕಿನಲ್ಲಿ ನಡೆದಿದೆ.

ಕೊಟ್ಟರಗಾ ಗ್ರಾಮದ ರೈತ ಸೂರ್ಯಕಾಂತ ಅಂಬಾರಾಯ ಹಂಗರಗಿ (34) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ತಿಳಿದುಬಂದಿದೆ.

ಚಿಂಚನಸೂರ ಪಿಕೆಜಿಬಿಯಲ್ಲಿ 2 ಲಕ್ಷ ಹಾಗೂ 5 ಲಕ್ಷ ಖಾಸಗಿ ಸಾಲವಿದೆ ಎಂದು ತಿಳಿದುಬಂದಿದೆ.

ಈ ಕುರಿತು ನರೋಣಾ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News