ಕಲಬುರಗಿ | ನ.17 ರಿಂದ 24 ರವರೆಗೆ ಐ.ಟಿ.ಎಫ್. ಕ್ರೀಡಾಕೂಟ
ಕಲಬುರಗಿ : ಕಲಬುರಗಿ ಜಿಲ್ಲೆಯಲ್ಲಿ ನವೆಂಬರ್ 17 ರಿಂದ 24ರಂದು ನಡೆಯುವ ಪ್ರತಿಷ್ಠತ ಐ.ಟಿ.ಎಫ್. ಕ್ರೀಡಾಕೂಟವನ್ನು ಯಾವುದೇ ಲೋಪದೋಷವಿಲ್ಲದಂತೆ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಬಿ. ಫೌಝಿಯಾ ತರನ್ನುಮ್ ಅವರು ಸೂಚಿಸಿದ್ದಾರೆ.
ಸೋಮವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಲವಾರು ಸಮಿತಿಗಳನ್ನು ರಚಿಸಿದ್ದು. ಸಮಿತಿಯ ಕೆಲಸಗಳ ಪೂರ್ವ ಸಿದ್ಧತೆ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಕೆಲಸ ಮಾಡುವಂತೆ ಸೂಚನೆ ನೀಡಿದರು.
ಮೈದಾನದ ಸ್ವಚ್ಫತೆ, ಉಪ ವೇದಿಕೆಗಳ ಸಿದ್ಧತೆ, ಗ್ರೀನ್ ಮ್ಯಾಟ್ಗಳ ಅಳವಡಿಕೆ ಮೈಕ್ ಬ್ಯಾರಿಕೇಡ್ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಸೈನ್ ಬೋರ್ಡಗಳನ್ನು ಅಭ್ಯಾಸಕ್ಕೆ ವ್ಯವಸ್ಥೆ ಕಲ್ಪಿಸುವುದನ್ನುಚಂದ್ರಶೇಖರ ಪಾಟೀಲ್‌ಗೆ ಸೂಚಿಸಿದರು. ಜಿಲ್ಲಾ ಕ್ರೀಡಾಂಗಣದಲ್ಲಿ ಜರಗುವ ಐ.ಟಿ.ಎಫ್. 2024 ಪೂರ್ವಸಿದ್ಧತೆ ಅಭ್ಯಾಸಕ್ಕೆ ವ್ಯವಸ್ಥೆ ಕಲ್ಪಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಹಾಯಕ ನಿರ್ದೇಶಕ ಸುರೇಶ ಕಂದ್ದವಾರ್ ಅವರಿಗೆ ಸೂಚಿಸಿದರು.
ಸಾರಿಗೆ ವಾಹನ ನೀಲುಗಡೆ ಸಮಿತಿಯನ್ನು ಉಪ ಪೊಲೀಸ್ ಆಯುಕ್ತರ ನೇತೃತ್ವದಲ್ಲಿ ನಡೆಸಿದ್ದು, ಸಾರಿಗೆ ವ್ಯವಸ್ಥೆಯಲ್ಲಿ ಯಾವುದೇ ರೀತಿ ತೊಂದರೆ ಯಾಗದಂತೆ ನಿರ್ವಹಿಸಲು ಸೂಚಿಸಿದರು.
ಆರೋಗ್ಯ ಸಮಿತಿಯು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಿದ್ದು, ಕ್ರೀಡಾಪಟುಗಳಿಗೆ ಆರೋಗ್ಯ ಸಂಬಂಧಪಟ್ಟ ಪೂರ್ವ ತಯಾರಿ ನಡೆಸಲು ಸೂಚಿಸಿದರು.
ಪ್ರಚಾರ ಸಮಿತಿಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಸಿದ್ದು, ಹೆಚ್ಚಿನ ರೀತಿಯಲ್ಲಿ ಪ್ರಚಾರಮಾಡುವಂತೆ ಸಭೆಯಲ್ಲಿ ಸೂಚಿಸಿದರು. ಎಲ್ಲಾ ಒಟ್ಟು 14 ಸಮಿತಿಗಳು ಒಟ್ಟಾಗಿ ಸಮನ್ವಯತೆಯಿಂದ ಕೆಲಸ ನಿರ್ವಹಿಸಲು ನಿರ್ದೇಶನ ನೀಡಿದರು.
ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ಭುವನೇಶ ಪಾಟೀಲ ದೇವಿದಾಸ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಜೆಸ್ಕಾಂ ಪ್ರಧಾನ ವ್ಯವಸ್ಥಾಪಕ ಆಶಪ್ಪ ಪೂಜಾರಿ, ಕಲಬುರಗಿ ಸಹಾಯಕ ಆಯುಕ್ತರಾದ ಸಾಹಿತ್ಯ, ಡಿ.ಹೆಚ್.ಓ. ಶರಣಬಸಪ್ಪ ಖ್ಯಾತನಾಳ, ಜಿಲ್ಲಾ ಪಂಚಾಯತ್ ನಿರ್ದೇಶಕ ಜಗದೇವಪ್, ಕೈಗಾರಿಕಾ ಇಲಾಖೆ ಉಪನಿರ್ದೇಶಕ ಅಬ್ದುಲ್ ಅಝೀಮ್, ಪೋಲಿಸ್ ಇಲಾಖೆ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.