ಹುಬ್ಬಳ್ಳಿ: ಪೊಲೀಸ್ ಇನ್ಸ್‌ಪೆಕ್ಟರ್ ಮಹಿಳಾ ಸಿಬ್ಬಂದಿಗೆ ಕಿರುಕುಳ ನೀಡಿದ್ದರೆ ಕ್ರಮ ಖಚಿತ

Update: 2024-12-24 11:11 GMT

ಹುಬ್ಬಳ್ಳಿ: ಹಳೆ ಹುಬ್ಬಳ್ಳಿಯ ಪೊಲೀಸ್ ಇನ್ಸ್‌ಪೆಕ್ಟರ್ ಸುರೇಶ್ ಯಳ್ಳೂರು ಲೈಂಗಿಕ ‌ಕಿರುಕುಳ ಆರೋಪದ ಕುರಿತು ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಪೊಲೀಸ್ ಆಯುಕ್ತರಿಂದ ಮಾಹಿತಿ ಪಡೆದಕೊಳ್ಳುತ್ತೇನೆ. ಪೊಲೀಸ್ ಇನ್ಸ್‌ಪೆಕ್ಟರ್ ತಪ್ಪು ಎಸಗಿದ್ದರೆ ಅವರೇ ಮೇಲೆ ಕ್ರಮ ತೆಗೆದುಕೊಳ್ಳುವೆ ಎಂದರು. 

ಅವಳಿ ನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟ ಆರೋಪ ವಿಚಾರವಾಗಿ ಮಾತನಾಡಿದ ಅವರು, ಈ ಬಗ್ಗೆ ರಿವ್ಯೂವ್ ಮಾಡುತ್ತೇನೆ. ಅದರಲ್ಲಿ ತಪ್ಪುಗಳು ಕಂಡು ಬಂದರೆ ಸರಿ ಮಾಡುತ್ತೇನೆ. ಹುಬ್ಬಳ್ಳಿಯಲ್ಲಿ ಮೂರು ಪೊಲೀಸ್ ಠಾಣೆಗಳ ಉದ್ಘಾಟನೆ ಇದೆ ಎಂದು ತಿಳಿಸಿದರು.

ಬೆಳಗಾವಿಯಲ್ಲಿ AICC ಕಾರ್ಯಕ್ರಮ ಇದೆ. ಗಾಂಧಿ ಪ್ರಥಮ ಬಾರಿಗೆ ಅಧ್ಯಕ್ಷರಾಗಿ ನೂರು ವರ್ಷ ಕಳೆದಿದೆ. ಅದರ ಶತಮಾನೋತ್ಸವದ ಕಾರ್ಯಕ್ರಮ ಬೆಳಗಾವಿಯಲ್ಲಿ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಇಡೀ ಕಾಂಗ್ರೆಸ್ ಸಮುದಾಯ ಭಾಗಿಯಾಗಲಿದೆ.

ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಸೋನಿಯಾ ಗಾಂಧಿ ,ಪ್ರಿಯಾಂಕಾ ಗಾಂಧಿ ಸಹಿತ ಲೋಕಸಭಾ ಸದಸ್ಯರು ಭಾಗಿಯಾಗಲಿದ್ದಾರೆ ಎಂದು ಹೇಳಿದರು.

 Full View

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News