ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯಗೆ ಬಿಗ್ ರಿಲೀಫ್ | ಹೈಕೋರ್ಟ್ ತೀರ್ಪನ್ನು ಸ್ವಾಗತಿಸಿದ ಸಚಿವ ಈಶ್ವರ್ ಖಂಡ್ರೆ

ಈಶ್ವರ್ ಖಂಡ್ರೆ
ಕಲಬುರಗಿ: ಮುಡಾ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ. ಆ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಈ ಕುರಿತು ಕಲಬುರಗಿಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಸಚಿವ ಈಶ್ವರ್ ಖಂಡ್ರೆ ಅವರು, ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಿರುವುದಕ್ಕೆ ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡುತ್ತೇನೆ ಎಂದು ಹೇಳಿದ್ದಾರೆ.
ವಿರೋಧ ಪಕ್ಷಗಳು ಉದ್ದೇಶಪೂರ್ವಕವಾಗಿ ಆಡಳಿತವನ್ನು ಬುಡಮೇಲು ಮಾಡುವುದಕ್ಕೆ ಮುಂದಾಗಿದ್ದವು. ಹೊಟ್ಟೆ ಕಿಚ್ಚುನಿಂದ ವಿಪಕ್ಷಗಳು ಆರೋಪ ಮಾಡುತ್ತಿದ್ದವು. ಇದೀಗ ಹೈಕೋರ್ಟ್ ಸಿಎಂಗೆ ರಿಲೀಫ್ ನೀಡಿದೆ, ಅದರ ತೀರ್ಪು ಸ್ವಾಗತಿಸುತ್ತೇನೆ ಎಂದರು.
ಯತ್ನಾಳ್ ಒಡೆತನದ ಸಿದ್ದಸಿರಿ ಫ್ಯಾಕ್ಟರಿಯನ್ನು ಬಂದ್ ಮಾಡಲು ಖಂಡ್ರೆ ಕೈವಾಡ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಯತ್ನಾಳ್ ಸುಪ್ರಿಂ ಕೋರ್ಟ್ , ಹೈಕೋರ್ಟ್ ಮೊರೆ ಹೋಗಿದ್ದರು. ಸುಪ್ರೀಂಕೋರ್ಟ್ ಆದೇಶವನ್ನು ನಾವು ಪಾಲನೆ ಮಾಡುತ್ತಿದ್ದೇವೆ, ದ್ವೇಷ ರಾಜಕಾರಣ ಮಾಡುವವರು ನಾವು ಅಲ್ಲ, ವಾಯು ಮಾಲಿನ್ಯ ಉಲ್ಲಂಘಿಸಿದ್ದಾರೆ, ಅದಕ್ಕಾಗಿ ಕಾರ್ಖಾನೆ ಬಂದ್ ಆಗಿದೆ ಎಂದು ತಿಳಿಸಿದರು.