ಬಿಜೆಪಿ ಸಾವಿನಲ್ಲೂ ರಾಜಕೀಯ ಮಾಡುತ್ತಿರುವುದು ದುರದೃಷ್ಟಕರ : ಕಾಂಗ್ರೆಸ್ ವಕ್ತಾರ ಪೀರಪಾಶಾ
ಕಲಬುರಗಿ : ಸಚಿನ್ ಪಂಚಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬoಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ಒತ್ತಾಯಿಸುತ್ತಿರುವುದು ನೋಡಿದರೇ ಬಿಜೆಪಿಯವರಿಗೆ ಬುದ್ಧಿ ಭ್ರಮಣೆಯಾಗಿರುವುದು ಸ್ಪಷ್ಟವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಪೀರಪಾಶಾ ಲೇವಡಿ ಮಾಡಿದ್ದಾರೆ.
ಸಚಿನ್ ಪಂಚಾಳ ಆತ್ಮಹತ್ಯೆ ಪ್ರಕರಣಕ್ಕೂ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೂ ಏನು ಸಂಬoಧ? ಸಂಬಂಧವಿಲ್ಲದ ವಿಷಯಗಳನ್ನು ಮತ್ತೊಬ್ಬರ ಮೇಲೆ ಹೇರುವುದು ಮತ್ತು ಸಾವಿನ ಮನೆಯಲ್ಲೂ ರಾಜಕಾರಣ ಮಾಡುವುದು ಬಿಜೆಪಿಯವರ ದುರ್ಬದ್ಧಿ ಎಲ್ಲರಿಗೂ ಗೊತ್ತಿದೆ. ಡೆತ್ ನೋಟ್ನಲ್ಲಿ ಪ್ರಿಯಾಂಕ್ ಖರ್ಗೆ ಅವರ ಆಪ್ತರ ಹೆಸರಿದ್ದರೇ ಅವರೇ ಕಾರಣರಾ? ಈ ಹಿಂದೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲೆ ನೇರವಾಗಿ ಮಹಿಳೆಯೊಬ್ಬಳು ಪೋಕ್ಸೋ ಕೇಸ್ ದಾಖಲಿಸಿದ್ದು, ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದು, ದೇಶದ ಗೃಹ ಮಂತ್ರಿ ಅಮಿತ್ ಶಾ ಅಂಬೇಡ್ಕರ್ ಅವರನ್ನು ಅವಮಾನಿಸುವ ಹೇಳಿಕೆ ನೀಡಿರುವುದರ ಬಗ್ಗೆ ಬಿಜೆಪಿಯವರು ಸ್ವಲ್ಪ ಮಾತನಾಡಲಿ ಎಂದರು.
ಬಿಜೆಪಿ ಸಾವಿನಲ್ಲೂ ರಾಜಕೀಯ ಮಾಡುತ್ತಿರುವುದು ಅತ್ಯಂತ ದುರದೃಷ್ಟಕರ. ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಎಂಬಂತೆ ಬಿಜೆಪಿಯವರು ರಾಜಕೀಯ ನಡೆಸಿದ್ದಾರೆ. ಇದರಿಂದ ಏನು ಫಲ ದೊರಕದು. ಪ್ರಿಯಾಂಕ್ ಖರ್ಗೆ ಅವರು ಪ್ರಭಾವಿ ನಾಯಕರಾಗಿ ಬೆಳೆಯುತ್ತಿರುವುದು. ಬಿಜೆಪಿಯವರ ಪ್ರಶ್ನೆಗಳಿಗೆ ಪ್ರತ್ಯುತ್ತರ ನೀಡುತ್ತಿರುವುದು ನೋಡಿ ಕಂಗಾಲಾಗಿದ್ದಾರೆ. ಅದಕ್ಕಾಗಿ ಈ ರಿತೀಯ ಆರೋಪಗಳನ್ನು ಮಾಡುತ್ತ ಹೊರಟಿದೆ. ಯಾವುದೇ ಕಾಣಕ್ಕೂ ರಾಜೀನಾಮೆ ಪ್ರಶ್ನೆಯೇ ಬರುವುದಿಲ್ಲ ಎಂದು ಬಿಜೆಪಿಯವರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.