ಕಲಬುರಗಿ | ಮಾಜಿ ಮೇಯರ್ ಕಾರಿನಲ್ಲಿದ್ದ 2 ಕೋಟಿ ರೂ. ಜಪ್ತಿ

Update: 2024-04-27 08:50 GMT

ಕಲಬುರಗಿ : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅತ್ಯಂತ ಸನ್ನದ್ಧ ಸ್ಥಿತಿಯಲ್ಲಿರುವ ಇಲ್ಲಿನ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಕಾರೊಂದರಲ್ಲಿ ಸಾಗಾಟ ಮಾಡುತ್ತಿದ್ದ 2 ಕೋಟಿ ರೂ. ಹಣವನ್ನು ಇಲ್ಲಿನ ರೈಲ್ವೆ ನಿಲ್ದಾಣದ ಬಳಿ ಇಂದು ಬೆಳಗ್ಗೆ ವಶಪಡಿಸಿಕೊಂಡಿರುವುದು ವರದಿಯಾಗಿದೆ.

ಮಾಜಿ ಮೇಯರ್ ವೊಬ್ಬರಿಗೆ ಸೇರಿದ ಕಾರಿನಲ್ಲಿ ಹಣ ಸಾಗಿಸುವ ಯತ್ನ ನಡೆಯುತ್ತಿತ್ತು ಎನ್ನಲಾಗಿದೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿರುವ ಅಧಿಕಾರಿಗಳು ಸಂಜೆ ವೇಳೆಗೆ ಈ ನಿಟ್ಟಿನಲ್ಲಿ ಖಚಿತ ಮಾಹಿತಿಯನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಲಿದ್ದಾರೆ ಎಂದು ಹೇಳಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News