ಕಲಬುರಗಿ | ಸೇತುವೆಯಿಂದ ನದಿಗೆ ಹಾರಿ ಯುವಕ-ಯುವತಿ ಆತ್ಮಹತ್ಯೆ

Update: 2024-07-15 11:52 GMT

ಕಲಬುರಗಿ : ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಕುರಿಕೋಟಾ ಸೇತುವೆ ಮೇಲಿಂದ ನದಿಗೆ ಹಾರಿ ಯುವಕ-ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾಗಾಂವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.

ಕಮಲಾಪುರ ತಾಲ್ಲೂಕಿನ ಮುದಡಗಾ ಗ್ರಾಮದ ನಿವಾಸಿ ಅನೀಲ್ ಕುಮಾರ್ ಮೂಲಗೆ (30) ಮತ್ತು ಸಂಧ್ಯಾರಾಣಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಅನೀಲ್ ಕುಮಾರ್‌ ಮೃತದೇಹ ಪತ್ತೆಯಾಗಿದ್ದು, ಯುವತಿಯ ಮೃತದೇಹಕ್ಕಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಯ ವಿವರ : ಸೋಮವಾರ ಬೆಳಗ್ಗೆ 11 ಗಂಟೆಯ ಸುಮಾರಿಗೆ ಅನೀಲ್ ಕುಮಾರ್ ಹಾಗೂ ಸಂಧ್ಯಾರಾಣಿ ಇಬ್ಬರು ಕಲಬುರಗಿಯಿಂದ ಬೈಕ್ ನಲ್ಲಿ ಬಂದು ಕುರಿಕೋಟಾ ಸೇತುವೆ ಬಳಿ ಬೈಕ್ ನಿಲ್ಲಿಸಿದ್ದಾರೆ. ಬಳಿಕ ಅಲ್ಲಿಯೇ ಮಾತನಾಡುತ್ತಾ ನಿಂತಿದ್ದಾಗ ಸಂಧ್ಯಾರಾಣಿ ಎಂಬವರು ಸೇತುವೆಯಿಂದ ನದಿಗೆ ಹಾರಿದ್ದಾರೆ ಎನ್ನಲಾಗಿದೆ. ಈ ವೇಳೆ ಅಲ್ಲೇ ಇದ್ದ ಸ್ಥಳೀಯರು ತಡೆಯುವಷ್ಟರಲ್ಲಿ ಯುವಕ ಅನೀಲ್ ಕೂಡ ನದಿಗೆ ಹಾರಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಡಿಎಸ್ಪಿ, ಮಹಾಗಾಂವ ಪೊಲೀಸ್ ಠಾಣೆಯ ಸಿಪಿಐ ಹಾಗೂ ಪಿಎಸ್‌ಐ ಆಶಾ ಅವರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News