ಕೊಲೆ ಪ್ರಕರಣದ ತನಿಖೆ | ಖುದ್ದು ಪರಿಶೀಲಿಸಲು ರಾಯಚೂರು ಎಸ್‍ಪಿಗೆ ಸೂಚಿಸಿದ ಸಿಎಂ

Update: 2024-09-17 12:38 GMT

ಕಲಬುರಗಿ: ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದಲ್ಲಿ ಆ.22 ರಂದು ನಡೆದಿದ್ದ ಸಂಜಯ್ ಕುರ್ಡೀಕರ್ ಕೊಲೆ ಪ್ರಕರಣದ ತನಿಖೆಯನ್ನು ಖುದ್ದು ಪರಿಶೀಲನೆ ನಡೆಸುವಂತೆ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಮಂಗಳವಾರ ಕಲಬುರಗಿಯಲ್ಲಿ ವಿಶೇಷ ಸಚಿವ ಸಂಪುಟ ಸಭೆಗೆ ತೆರಳುವ ಮುನ್ನ ಮುಖ್ಯಮಂತ್ರಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಈ ವೇಳೆ ಕೊಲೆಯಾದ ಸಂಜಯ್ ಪತ್ನಿ ಶಾಂತಮ್ಮ ಮುಖ್ಯಮಂತ್ರಿಗೆ ಮನವಿ ಮಾಡಿದರು.

ಬಳಿಕ ಮುಖ್ಯಮಂತ್ರಿಗಳು, ಸ್ಥಳದಲ್ಲೇ ದೂರವಾಣಿ ಮೂಲಕ ರಾಯಚೂರು ಎಸ್‍ಪಿ ಅವರನ್ನು ಸಂಪರ್ಕಿಸಿ ಕೊಲೆ ಪ್ರಕರಣದ ವಿವರಣೆ ಕೇಳಿದರು. ಬಳಿಕ ಕೊಲೆ ಪ್ರಕರಣದ ತನಿಖೆಯನ್ನು ಖುದ್ದಾಗಿ ಪರಿಶೀಲನೆ ನಡೆಸಬೇಕು ಎಂದು ತಿಳಿಸಿದರು.

ಈವರೆಗೂ ನಡೆದಿರುವ ತನಿಖೆ ಸಮರ್ಪಕವಾಗಿದೆಯೇ? ಕೊಲೆಯಲ್ಲಿ ಬೇರೆ ಯಾರಾದರೂ ಭಾಗಿಯಾಗಿದ್ದು ಅವರು ತಪ್ಪಿಸಿಕೊಂಡಿದ್ದಾರಾ? ನಿಜವಾದ ಆರೋಪಿಗಳು ಹೊರಗೆ ಇದ್ದರೆ ಸಂತ್ರಸ್ಥ ಕುಟುಂಬಕ್ಕೆ ನ್ಯಾಯ ದೊರಕಲು ಸಾಧ್ಯವಿಲ್ಲ. ಆದ್ದರಿಂದ ಖುದ್ದಾಗಿ ಕೊಲೆ ಪ್ರಕರಣದ ತನಿಖೆಯ ಮೇಲೆ ನಿಗಾ ವಹಿಸಬೇಕು, ಬಳಿಕ ಈ ಬಗ್ಗೆ ನನಗೆ ವರದಿ ಮಾಡಬೇಕು ಎಂದು ಮುಖ್ಯಮಂತ್ರಿ ಸ್ಪಷ್ಟ ಸೂಚನೆ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News