ಕಲಬುರಗಿ ಕೇಂದ್ರ ಕಾರಾಗೃಹಕ್ಕೆ ಗಾಂಜಾ ಸಾಗಾಟ : ಮಹಿಳಾ ಸಿಬ್ಬಂದಿ ಬಂಧನ

Update: 2024-09-19 18:41 GMT

ಕಲಬುರಗಿ : ಇಲ್ಲಿನ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಕಸಗುಡಿಸುವ ಮಹಿಳಾ ಸಿಬ್ಬಂದಿಯೊಬ್ಬರು ಖೈದಿಗಳಿಗೆ ಗಾಂಜಾ ಸಾಗಣೆ ಮಾಡುತ್ತಿದ್ದ ಆರೋಪದಡಿ ಫರಹತಾಬಾದ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಬೀದರ್‌ನಿಂದ ಕಲಬುರಗಿ ಜಿಲ್ಲಾ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆಯಾಗಿ ಬಂದಿದ್ದ 'ಡಿ' ಗ್ರೂಪ್ ಸಿಬ್ಬಂದಿ ಪದ್ಮಾವತಿ ಎಂಬವರು ಬಂಧಿತ ಆರೋಪಿ ಎಂದು ತಿಳಿದು ಬಂದಿದೆ.

ಕಾರಾಗೃಹದ ಪ್ರವೇಶ ದ್ವಾರದಲ್ಲಿ ಭದ್ರತಾ ಪಡೆಯ ಸಿಬ್ಬಂದಿಗಳು ಪದ್ಮಾವತಿ ಅವರ ಬ್ಯಾಗ್‌ ತಪಾಸಣೆಗೊಳಪಡಿಸಿದಾಗ ಕರವಸ್ತ್ರದಿಂದ ಸುತ್ತಿದ ಉಂಡೆ ಆಕಾರದ ಅನುಮಾನಾಸ್ಪದ ವಸ್ತು ಕಂಡು ಬಂದಿದೆ. ಈ ಬಗ್ಗೆ ಭದ್ರತಾ ಸಿಬ್ಬಂದಿಗಳು ತಪಾಸಣೆ ಮಾಡಿದಾಗ 100 ಗ್ರಾಂ. ಗಾಂಜಾ ಪತ್ತೆಯಾಗಿದೆ ಎಂದು  ತಿಳಿದು ಬಂದಿದೆ.

ಸದ್ಯ ಪದ್ಮಾವತಿಯನ್ನು ಬಂಧನದಲ್ಲಿರಿಸಿ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News