ಕಲಬುರಗಿ ಬಂದ್‌ಗೆ ಕರೆ | ಶಾಲೆಗಳಿಗೆ ರಜೆ ಘೋಷಣೆ

Update: 2024-12-23 16:10 GMT

ಕಲಬುರಗಿ : ಸಂವಿಧಾನ ರಕ್ಷಣಾ ಸಮಿತಿ ಹಾಗೂ ವಿವಿಧ ಸಂಘಟನೆಗಳು ಡಿ.24ರಂದು ಕಲಬುರಗಿ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ದೃಷ್ಠಿಯಿಂದ ಡಿ.24 ರಂದು ಕಲಬುರಗಿ ನಗರದ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಈ ಕುರಿತು ಡಿ.ಡಿ.ಪಿ‌.ಐ ಸೂರ್ಯಕಾಂತ ಮದಾನೆ ಅವರು ಪ್ರತ್ಯೇಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಲ್ಲದೆ, ಕಲಬುರಗಿ ನಗರದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಡಿ.23ರ ರಾತ್ರಿ 12 ಗಂಟೆಯಿಂದ ಡಿ.24ರ ರಾತ್ರಿ 12 ಗಂಟೆವರೆಗೆ ಕರ್ನಾಟಕ ಅಬಕಾರಿ ಕಾಯ್ದೆ-1965ರ ಕಲಂ 21ರಂತೆ ಕಲಬುರಗಿ ತಾಲೂಕಿನಾದ್ಯಂತ ಎಲ್ಲಾ ತರಹದ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರು ಆದೇಶ ಹೊರಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News