ಕಲಬುರಗಿ | ಪ್ಯಾರಾ ಮೆಡಿಕಲ್ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿ
Update: 2025-01-15 06:52 GMT
ಕಲಬುರಗಿ: ಹೃದಯಾಘಾತದಿಂದ17 ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದಲ್ಲಿ ನಡೆದಿದೆ.
ಹೃದಯಾಘಾತದಿಂದ ಮೃತಪಟ್ಟಿರುವ ವಿದ್ಯಾರ್ಥಿಯನ್ನು ನಾಲವಾರ ಗ್ರಾಮದ ಕೊರೇಶ್ ಸಿದ್ದಣ್ಣ ಮದ್ರಿ (17) ಎಂದು ಗುರುತಿಸಲಾಗಿದೆ. ಗ್ರಾಮದಲ್ಲಿ ಸ್ನೇಹಿತರ ಜತೆ ಕುಳಿತಾಗ ತೀವ್ರ ಎದೆನೋವು ಕಾಣಿಸಿಕೊಂಡಿದೆ, ಕೂಡಲೇ ಅಲ್ಲಿನ ನಾಲವಾರದ ಖಾಸಗಿ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಕೊರೇಶ್ ಮದ್ರಿ ಕಲಬುರಗಿ ನಗರದಲ್ಲಿ ಖಾಸಗಿ ಕಾಲೇಜಿನಲ್ಲಿ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.