ಕಲಬುರಗಿ | ಪ್ರತಿ ಟನ್ ಕಬ್ಬಿಗೆ 2,700 ರೂ. ನೀಡಲು ಕೆಪಿಆರ್ ಶುಗರ್ಸ್ ಒಪ್ಪಿಗೆ : ಭೀಮರಾಯ

Update: 2024-11-27 16:34 GMT

ಕಲಬುರಗಿ : ಪ್ರಸಕ್ತ 2024-25ನೇ ಸಾಲಿನ ಕಬ್ಬು ನುರಿಸುವ ಹಂಗಾಮಿಗೆ ಸಂಬಂಧಿಸಿದಂತೆ ಜಿಲ್ಲೆಯ ಆಫಜಲ್‌ಪುರ ತಾಲೂಕಿನ ಚಿಣಮಗೇರಾದ ಕೆಪಿಆರ್ ಶುಗರ್ ಆ್ಯಂಡ್ ಅಪೇರಲ್ಸ್ ಲಿ. ಸಕ್ಕರೆ ಕಾರ್ಖಾನೆಯು ಕಬ್ಬು ಕಟಾವು ಮತ್ತು ಸಾಗಾಣಿಕೆ ವೆಚ್ಚವನ್ನು ಹೊರತುಪಡಿಸಿ ಪ್ರತಿ ಟನ್ ಕಬ್ಬಿಗೆ 2700 ರೂ. ದರ ರೈತರಿಗೆ ನೀಡಲು ಒಪ್ಪಿಕೊಂಡಿದೆ ಎಂದು ಅಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಭೀಮರಾಯ ತಿಳಿಸಿದ್ದಾರೆ.

ಕಳೆದ ನ.8ರಂದು ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಕಬ್ಬು ಬೆಳೆಗಾರರು, ರೈತ ಮುಖಂಡರು ಹಾಗೂ ಸಕ್ಕರೆ ಕಾರ್ಖಾನೆಗಳ ಪದಾಧಿಕಾರಿಗಳ ಸಭೆಯಲ್ಲಿ ರೈತರ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಸಕ್ಕರೆ ಕಾರ್ಖಾನೆಗಳು ಕಬ್ಬು ಕಟಾವು ಮತ್ತು ಸಾಗಾಣಿಕೆ ವೆಚ್ಚವನ್ನು ಹೊರತುಪಡಿಸಿ ಪ್ರತಿ ಟನ್ ಕಬ್ಬಿಗೆ ಏಕ ರೀತಿಯ ದರ ನಿಗದಿಪಡಿಸಬೇಕೆಂಬ ನಿರ್ಣಯ ಕೈಗೊಳ್ಳಲಾಗಿತ್ತು.

ಅದರಂತೆ ಜಿಲ್ಲಾಡಳಿತದ ಮನವಿಗೆ ಸ್ಪಂದಿಸಿರುವ ಕೆಪಿಆರ್ ಶುಗರ್ಸ್ ಕಂಪನಿಯು 2,700 ರೂ. ದರವನ್ನು ನೀಡುವುದಾಗಿ ಘೋಷಿಸಿ ಲಿಖಿತ ಹೇಳಿಕೆ ನೀಡಿರುತ್ತಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News