ಕಲಬುರಗಿ | 4.59 ಲಕ್ಷ ರೂ. ಮೌಲ್ಯದ 22 ಮೊಬೈಲ್ ಪತ್ತೆಹಚ್ಚುವಲ್ಲಿ ಯಶಸ್ವಿಯಾದ ಪೊಲೀಸರು

Update: 2025-01-03 16:39 GMT

ಕಲಬುರಗಿ : ಆಳಂದ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ ಸಾರ್ವಜನಿಕರು ಕಳೆದುಕೊಂಡ 4.59 ಲಕ್ಷ ರೂ. ಮೌಲ್ಯದ 22 ಮೊಬೈಲ್‌ ಗಳನ್ನು ಪುನಃ ವಾರಸುದಾರರಿಗೆ ಹಿಂದಿರುಗಿಸುವಲ್ಲಿ ಆಳಂದ ಪೊಲೀಸ್ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಮೊಬೈಲ್ ಕಳೆದುಕೊಂಡ ಸಾರ್ವಜನಿಕರು ಆಳಂದ ಪೊಲೀಸ್‌ ಠಾಣೆಯಲ್ಲಿ ಪ್ರಕರಣಗಳು ದಾಖಲಿಸಿದ್ದರು. ಸದರಿ ಮೊಬೈಲ್‌ ಗಳ ಪತ್ತೆ ಕುರಿತು ಅಪರ ಪೊಲೀಸ್‌ ಅಧೀಕ್ಷಕರಾದ ಮಹೇಶ ಮೇಘಣ್ಣನವರ, ಆಳಂದ ಉಪ-ವಿಭಾಗದ ಡಿ.ಎಸ್.ಪಿ. ಗೋಪಿ ಬಿ.ಆರ್. ಅವರ ಮಾರ್ಗದರ್ಶನದಲ್ಲಿ ಆಳಂದ ಪೊಲೀಸ್‌ ಠಾಣೆಯ ಪಿಐ ಶರಣಬಸಪ್ಪ ಕೋಡ್ಲಾ, ಪಿಎಸ್ಐ ಭೀಮರಾಯ ಬಂಕ್ಲಿ ಅವರ ನೇತೃತ್ವದಲ್ಲಿ ಸಿಬ್ಬಂದಿಯವರನ್ನೊಳಗೊಂಡ ತಂಡ ರಚಿಸಲಾಗಿತ್ತು.

ಈ ತಂಡದಲ್ಲಿದ್ದ ಅಧಿಕಾರಿ ಮತ್ತು ಸಿಬ್ಬಂದಿಯವರು ಕಾರ್ಯಪ್ರವೃತ್ತರಾಗಿ ಸಾರ್ವಜನಿಕರ ಕಳವಾದ ಸುಮಾರು 22 ಮೊಬೈಲ್‌ ಗಳನ್ನು (ಅಂದಾಜು ಮೌಲ್ಯದ ರೂ. 4,59,000) ಪತ್ತೆ ಮಾಡಿ ಜಪ್ತಿ ಪಡಿಸಿಕೊಂಡಿದ್ದು, ಸದರಿ ಮೊಬೈಲ್‌ ಗಳನ್ನು ಸಂಬಂಧಪಟ್ಟ ವಾರಸದಾರರಿಗೆ ಹಿಂದಿರುಗಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕಳವಾದ ಮೊಬೈಲ್‌ ಗಳ ಪತ್ತೆ ಹಚ್ಚಿ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುವ ತಂಡದಲ್ಲಿದ್ದ ಪೊಲೀಸ್‌ ಅಧಿಕಾರಿಗಳ ಕಾರ್ಯವನ್ನು ಎಸ್ಪಿ ಅಡ್ಡೂರು ಶ್ರೀನಿವಾಸಲು ಅವರು ಮೆಚ್ಚುಗೆ ವ್ಯಕ್ತಪಡಿಸಿ ಪ್ರಶಂಶಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News