ಕಲಬುರಗಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ 6 ಎಕರೆ ಕಬ್ಬು ಹಾನಿ

ಕಲಬುರಗಿ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ, ಅಪಾರ ಪ್ರಮಾಣದಲ್ಲಿ ಕಬ್ಬು ಹಾನಿಯಾಗಿರುವ ಘಟನೆ ಶನಿವಾರ ಜೇವರ್ಗಿ ತಾಲೂಕಿನ ಜೇರಟಗಿ ಗ್ರಾಮದಲ್ಲಿ ನಡೆದಿದೆ.
ಜೇರಟಗಿ ಗ್ರಾಮದ ರೈತ ಮಾಹಾಂತೇಶ ಶ್ರೀಶೈಲ ವಾಲಿಕಾರ ಜಮೀನಿಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ 6 ಏಕರೆಗೂ ಹೆಚ್ಚು ಕಬ್ಬು ಹಾನಿಯಾಗಿದೆ ಎಂದು ತಿಳಿದುಬಂದಿದೆ.
ಕಬ್ಬಿಗೆ ಬೆಂಕಿ ತಗುಲಿದ ಕೂಡಲೇ ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದರಿಂದ, ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಬೆಂಕಿ ನಂದಿಸುವಷ್ಟರಲ್ಲಿ ಅಪಾರ ಪ್ರಮಾಣದಲ್ಲಿ ಕಬ್ಬು ಸುಟ್ಟು ಹಾಳಾಗಿದೆ
ಲಕ್ಷಾಂತರ ರೂ. ಖರ್ಚು ಮಾಡಿ 6 ಎಕರೆ ಜಮೀನಿನಲ್ಲಿ ಕಬ್ಬು ಬೆಳೆಯಲಾಗಿತ್ತು. ಆದರೆ, ಜಮೀನಿನಲ್ಲಿರುವ ವಿದ್ಯುತ್ ಟಿಸಿಯಿಂದ ಶಾರ್ಟ್ ಸರ್ಕ್ಯೂಟ್ ಆಗಿ ಕಬ್ಬು ಸುಟ್ಟು ಹಾನಿಯಾಗಿದೆ. ನಷ್ಟವಾದ ಕಬ್ಬಿಗೆ ಪರಿಹಾರ ನೀಡಬೇಕು ಎಂದು ರೈತ ಮಾಹಾಂತೇಶ ವಾಲಿಕಾರ ಅವರು ಸರರಕ್ಕೆ ಮನವಿ ಮಾಡಿದ್ದಾರೆ.
ಈ ಘಟನೆ ನೆಲೋಗಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.