ಕಲಬುರಗಿ | ಮರಕ್ಕೆ ಡಿಕ್ಕಿ ಹೊಡೆದ ಕಾರು; ಮೂವರು ಮೃತ್ಯು
Update: 2025-01-16 09:20 GMT
ಕಲಬುರಗಿ : ಕಾರು ಮರಕ್ಕೆ ಢಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಸೇಡಂ ತಾಲ್ಲೂಕಿನ ಎಲ್ಲಮ್ಮಾಗೇಟ್ ಸಮೀಪದಲ್ಲಿ ಬುಧವಾರ ನಡೆದಿದೆ.
ಮೃತರನ್ನು ಸೇಡಂ ತಾಲ್ಲೂಕಿನ ಮೀನಹಾಬಾಳ ಗ್ರಾಮದ ಯಲ್ಲಪ್ಪ ಹಳಿಮನಿ (45), ತೊಟ್ನಳ್ಳಿ ಗ್ರಾಮದ ಸದಾಶಿವ (65) ಮತ್ತು ಮೀನಹಾಬಾಳ ಗ್ರಾಮದ ಭೀಮಶಾ (44) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಮೀನಹಾಬಾಳ ಗ್ರಾಮದ ಮೌನೇಶ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ತಿಳಿದು ಬಂದಿದೆ.
ನಾಲ್ವರು ಪ್ರಯಾಣಿಕರಿದ್ದ ಕಾರು ಚಿಂಚೋಳಿ ಮಾರ್ಗದಿಂದ ಸೇಡಂ ಕಡೆಗೆ ಹೊರಟಿತ್ತು ಎನ್ನಲಾಗಿದೆ. ವೇಗವಾಗಿ ಕಾರು ಚಲಾಯಿಸಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಢಿಕ್ಕಿ ಹೊಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಸೇಡಂ ಠಾಣೆಯ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ಭೇಟಿ ನೀಡಿ, ಪರಿಶೀಲಿನೆ ನಡೆಸಿದರು.
ಈ ಕುರಿತು ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.