ಕಲಬುರಗಿ | ವೃದ್ಧೆ ಮೇಲೆ ಅತ್ಯಾಚಾರಗೈದು ಕೊಲೆ ಪ್ರಕರಣ; ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ

Update: 2025-01-16 14:55 GMT

ಸಾಂದರ್ಭಿಕ ಚಿತ್ರ

ಕಲಬುರಗಿ : 60 ವರ್ಷದ ವೃದ್ಧೆ ಮೇಲೆ ಅತ್ಯಾಚಾರಗೈದು, ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಜೀವಾವಧಿ ಶಿಕ್ಷೆ ಮತ್ತು 20 ಸಾವಿರ ರೂ. ದಂಡ ವಿಧಿಸಿ ಇಲ್ಲಿನ ಕಲಬುರಗಿಯ 5ನೇ ಹೆಚ್ಚುವರಿ ವಿಶೇಷ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶ ಪ್ರಕಟಿಸಿದೆ.

ಬಳ್ಳಾರಿ ಜಿಲ್ಲೆಯ ತೆಕ್ಕಲಕೋಟೆಯ ಮಂಜುನಾಥ ಟಿ.ಯು. ಎಂಬಾತನೇ ಶಿಕ್ಷೆಗೆ ಒಳಗಾದವರು.

ಬಟ್ಟೆ ವ್ಯಾಪಾರ ಮಾಡುತ್ತಿದ್ದ ಮಂಜುನಾಥ, 2021ರ ಜುಲೈ ತಿಂಗಳಲ್ಲಿ ಯಡ್ರಾಮಿ ತಾಲ್ಲೂಕಿನ ಜೇರಟಗಿ ಬಸ್ ನಿಲ್ದಾಣದಲ್ಲಿ ಮಲಗಿದ್ದ ವೃದ್ಧೆಯ ಮೇಲೆ ಅತ್ಯಾಚಾರ ಮಾಡಿದ ಬಳಿಕ ಕೊಲೆ ಮಾಡಿ ಪರಾರಿಯಾಗಿದ್ದ.

ಈ ಕುರಿತು ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖಾಧಿಕಾರಿ ಪಿಎಸ್‌ಐ ರಾಜಕುಮಾರ, ಸಿಪಿಐ ಎಂ.ಶಿವಪ್ರಸಾದ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಸಿ, 13 ಜನ ಸಾಕ್ಷಿದಾರರನ್ನು ನ್ಯಾಯಾಲಯ ವಿಚಾರಣೆಗೆ ಒಳಪಡಿಸಿದ್ದರು. ಆರೋಪಿಗೆ ನ್ಯಾಯಾಧೀಶ ಚಂದ್ರಶೇಖರ್ ಕರೋಶಿ ಅವರು ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ಸರಕಾರದ ಪರವಾಗಿ ಅಭಿಯೋಜಕ ಹಯಾಳಪ್ಪ ಎನ್.ಬಳಬಟ್ಟಿ ವಾದ ಮಂಡಿಸಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News