ಕಲಬುರಗಿ | ಜಾತಿ ವ್ಯವಸ್ಥೆ ನಿರ್ಮೂಲನೆಯಿಂದ ಮಾತ್ರ ನವಭಾರತ ನಿರ್ಮಾಣ ಸಾಧ್ಯ : ಡಾ.ವಡ್ಡಗೆರೆ ನಾಗರಾಜಯ್ಯ

Update: 2025-04-05 22:28 IST
Photo of Program
  • whatsapp icon

ಕಲಬುರಗಿ : ಭಾರತದಲ್ಲಿನ ಜಾತಿ ವ್ಯವಸ್ಥೆ ನಿರ್ಮೂಲನೆಯಿಂದ ಮಾತ್ರ ನವಭಾರತ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದು ಕವಿ, ಸಂಶೋಧಕ ಹಾಗೂ ಸಾಮಾಜಿಕ ಕಾರ್ಯಕರ್ತ ಡಾ.ವಡ್ಡಗೆರೆ ನಾಗರಾಜಯ್ಯ ಹೇಳಿದರು.

ಗುಲ್ಬರ್ಗಾ ವಿಶ್ವವಿದ್ಯಾಲಯ ಜ್ಞಾನ ಗಂಗಾ ಆವರಣ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ಡಾ.ಬಾಬು ಜಗಜೀವನರಾಮ್ ಅಧ್ಯಯನ ಸಂಶೋಧನಾ ಮತ್ತು ವಿಸ್ತರಣಾ ಪೀಠದಿಂದ ಆಯೋಜಿಸಿದ್ದ ಡಾ.ಬಾಬು ಜಗಜೀವನರಾಮ್ ರವರ 118 ನೇ ಜಯಂತಿ ಕಾರ್ಯಕ್ರಮ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಭಾರತ ದೇಶವು ಬಹುತ್ವ ಮತ್ತು ಬುದ್ಧ ತತ್ವ ಸಿದ್ದಾಂತಗಳ ಮೇಲೆ ನಿಂತಿದೆ ಮತ್ತು ಅದರ ಮಾರ್ಗದಲ್ಲಿ ಸಾಗಿದರೆ ಜಾತಿ ಮತ್ತು ಅಸ್ಪೃಶ್ಯ ರಹಿತ ಸಮಾಜ ನಿರ್ಮಾಣ ಸಾಧ್ಯ ಎಂದರು.

ಭಾರತ ಪ್ರತಿಯೊಬ್ಬ ಪ್ರಜೆಗೂ ಸಾಮಾಜಿಕ ನ್ಯಾಯ ಒದಗಿಸುವುದೇ ಸಂವಿಧಾನ ಮೂಲ ಗುರಿಯಾಗಿದೆ ಎಂದರು.

1.ಬುದ್ಧ, 2.ಬಸವಣ್ಣ, 3.ಬಾಪೂಜಿ (ಮಹಾತ್ಮ ಗಾಂಧೀಜಿ) 4.ಬಾಬಾಸಾಹೇಬ (ಡಾ.ಬಿ.ಆರ್.ಅಂಬೇಡ್ಕರ್) 5.ಡಾ.ಬಾಬು ಜಗಜೀವನರಾಮ್ ಎಂಬ ಮಹಾ ನಾಯಕರು ಭಾರತದಲ್ಲಿ ಸಾಮಾಜಿಕ ಪಿಡುಗುಗಳ ವಿರುದ್ಧ ಹೋರಾಟ ಮಾಡಿದರು ಎಂದು ಹೇಳಿದರು.

ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ಗುಲ್ಬರ್ಗಾ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಗೂರು ಶ್ರೀರಾಮುಲು ಮಾತನಾಡಿ, ಡಾ.ಬಾಬು ಜಗಜೀವನರಾಮ್ ರವರು ಭಾರತದಲ್ಲಿ ಸಾಮಾಜಿಕ ನ್ಯಾಯದ ಐಕಾನ್ ಆಗಿ ಹೊರಹೊಮ್ಮಿದ್ದಾರೆ ಎಂದು ಹೇಳಿದರು.

ಆರ್ಥಿಕ ಸಾಮಾಜಿಕ ಮತ್ತು ರಾಜಕೀಯ ನ್ಯಾಯದ ಪರವಾಗಿ ಧ್ವನಿ ಎತ್ತಿದರು. ಭಾರತ ಸ್ವತಂತ್ರ ನಂತರ ದೇಶದ ಪ್ರಗತಿಗೆ ತಮ್ಮದೇ ಕೊಡುಗೆ ನೀಡಿದ್ದಾರೆ ಎಂದರು.

ಡಾ.ಬಾಬು ಜಗಜೀವನರಾಮ್ ಅಧ್ಯಯನ ಸಂಶೋಧನಾ ಮತ್ತು ವಿಸ್ತರಣಾ ಸಂಸ್ಥೆಯ ನಿರ್ದೇಶಕರಾದ ಡಾ.ದೇವಿದಾಸ ಮಾಲೆ ಮಾತನಾಡಿದರು.

ಕಾರ್ಯಕ್ರಮದಲ್ಲಿ ಗೌರವಾನ್ವಿತ ಅತಿಥಿಗಳಾಗಿ ಸಿಂಡಿಕೇಟ್ ಸದಸ್ಯರಾದ ಶ್ರೀದೇವಿ ಎಸ್.ಕಟ್ಟಿಮನಿ, ವಿದ್ಯಾ ವಿಷಯಕ ಪರಿಷತ್ ಸದಸ್ಯರಾದ ಪ್ರೊ.ಸಿ.ಸುಲೋಚನಾ, ಗೌರವ ಉಪಸ್ಥಿತಿ ಮೌಲ್ಯಮಾಪನ ಕುಲಸಚಿವರಾದ ಡಾ.ಎನ್.ಜಿ.ಕಣ್ಣೂರ, ಆಡಳಿತಾತ್ಮಕ ಕುಲಸಚಿವರಾದ ಪ್ರೊ.ರಮೇಶ ಲಂಡನಕರ್ ಮತ್ತು ಹಣಕಾಸು ಅಧಿಕಾರಿ ಜಯಾಂಬಿಕಾ ಉಪಸ್ಥಿತರಿದ್ದರು.

ಎಲ್ಲಾ ನಿಕಾಯದ ಡೀನರು ಮತ್ತು ವಿಭಾಗಗಳ ಮುಖ್ಯಸ್ಥರು ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ಸಂಶೋಧನಾ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಇತಿಹಾಸ ವಿಭಾಗದ ವಿದ್ಯಾರ್ಥಿ ಅಣವೀರಗೌಡ ಬಿರಾದಾರ ನಿರೂಪಿಸಿದರು. ವಂದನಾರ್ಪಣೆಯನ್ನು ರಿಷಿ ಕುಮಾರ್ ಮಾಡಿದರು.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News